Headlines

ಹಿರಿಯ ನಟ ಎಂ.ಎಸ್. ಉಮೇಶ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ

ಹಿರಿಯ ನಟ ಎಂ.ಎಸ್. ಉಮೇಶ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ


ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್ (ಎಂ.ಎಸ್. ಉಮೇಶ್) ಅವರು ನಿಧನರಾದರು. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತದೆ. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಉಮೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾಗ ಅನೇಕ ಕಲಾವಿದರು ಮಾತನಾಡಿ ಹೋಗಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ಆದರೆ ಪ್ರಾರ್ಥನೆ ಫಲಿಸಿಲ್ಲ. ಚಿಕಿತ್ಸೆ ಫಲಕಾರಿ ಆಗದೇ ಎಂ.ಎಸ್. ಉಮೇಶ್ ಅವರು ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಇತ್ತೀಚೆಗೆ ಉಮೇಶ್ ಅವರು ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ 4ನೇ ಹಂತದ ಕ್ಯಾನ್ಸರ್ ಅವರಿಗೆ ಇದೆ. ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸಿದ ವೈದ್ಯರು ರೋಗವನ್ನು ಖಚಿತಪಡಿಸಿಕೊಂಡು, ಕಿಮೊಥೆರಪಿ ಮತ್ತು ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದ್ದರು. ಈಗ ಉಮೇಶ್ ನಿಧನರಾಗಿರುವುದು ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ನೋವುಂಟು ಮಾಡಿದೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ಮಾಡಲು ಪುಟ ರೀಫ್ರೆಶ್ ಮಾಡಿ…

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 8:46 am, ಭಾನುವಾರ, 30 ನವೆಂಬರ್ 25



Source link

Leave a Reply

Your email address will not be published. Required fields are marked *