ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಜಿಗುಪ್ಸೆ: ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಕುರಿಗಾಹಿ ಯುವಕ ಆತ್ಮಹತ್ಯೆ!

ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಜಿಗುಪ್ಸೆ: ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಕುರಿಗಾಹಿ ಯುವಕ ಆತ್ಮಹತ್ಯೆ!


ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಜಿಗುಪ್ಸೆ: ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಕುರಿಗಾಹಿ ಯುವಕ ಆತ್ಮಹತ್ಯೆ!

ಚಿಕ್ಕಮಗಳೂರು, ಏಪ್ರಿಲ್ 4: ಮದುವೆ ವಯಸ್ಸು ಮೀರಿದರೂ ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು (ಚಿಕ್ಕಮಗಳೂರು) ಜಿಲ್ಲೆಯ ಕಡೂರು ತಾಲೂಕಿನ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ ಕುಮಾರ್ (26) ದುರ್ದೈವಿ. ಕುಮಾರ್ ಕಡೂರು ತಾಲೂಕಿನ ಬೋರಗಾನಹಳ್ಳಿಯ ಪರಮೇಶ್ವರಪ್ಪ ಎಂಬುವವರ ತೋಟದಲ್ಲಿ ಕುರಿ ಮಂಡೆ ಬಿಟ್ಟುಕೊಂಡು ಕೆಲಸ ಮಾಡುತ್ತಿದ್ದ.

ಘಟನೆಯ ಹಿನ್ನೆಲೆ

ಇತ್ತೀಚೆಗೆ ರಾಮನವಮಿ ಹಬ್ಬಕ್ಕೆ ಹೋಗಿದ್ದ ಕುಮಾರ್, ಮದುವೆ ಮಾಡಿಸಿ ಮಾಡುವಂತೆ ಪೋಷಕರ ಬಳಿ ಹಿಡಿದಿದ್ದ. ಆದರೆ, ಪ್ರೀತಿ ಮೊದಲು ಇಬ್ಬರು ಅಣ್ಣಂದಿರ ಮದುವೆಯಾಗಿ, ನಂತರ ನಿನಗೆ ಮದುವೆ ನಡೆಯಲಿದೆ ಎಂದು ತಿಳಿಸಿದ್ದರು. ಅಲ್ಲಿಯವರೆಗೆ ಕುರಿ ಮೇಯಿಸಿಕೊಂಡು ಇರುವಂತೆ ಸೂಚಿಸಿ ಮಗನನ್ನು ವಾಪಸ್ ಕಳುಹಿಸಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ಲವ್ ಜಿಹಾದ್ ಕೇಸ್ ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್: ವಿಡಿಯೋ ಇರೋದು ನಿಜ, ಆದರೆ… ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ!

ಆದರೆ, ತನಗೆ ಮದುವೆಯಾಗುತ್ತಿಲ್ಲ ಎಂಬ ಚಿಂತೆಯಲ್ಲಿದ್ದ ಕುಮಾರ್, ಮಾನಸಿಕವಾಗಿ ಜಿಗುಪ್ಸೆಗೆ ಒಳಗಾಗಿದ್ದ. ಇದೇ ವಿಚಾರವಾಗಿ ಮನನೊಂದು ಕುಡಿದ ಮತ್ತಿನಲ್ಲಿ ತೋಟದ ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಗಟಿ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *