ಶಕ್ತಿ ಯೋಜನೆಯೇ ಬಂಡವಾಳ, ಮಹಿಳೆಯರೇ ಟಾರ್ಗೆಟ್​​: ಕಳ್ಳಿಯರ ಗ್ಯಾಂಗ್​​ ಭೇದಿಸಿದ ಖಾಕಿ

ಶಕ್ತಿ ಯೋಜನೆಯೇ ಬಂಡವಾಳ, ಮಹಿಳೆಯರೇ ಟಾರ್ಗೆಟ್​​: ಕಳ್ಳಿಯರ ಗ್ಯಾಂಗ್​​ ಭೇದಿಸಿದ ಖಾಕಿ


ಕಲಬುರಗಿ, ಡಿಸೆಂಬರ್ 25: ಮಹಿಳೆಯರಿಗೆ ಅನುಕೂಲವಾಗುವ ರಾಜ್ಯ ಸಾರಿಗೆ ಸಾಮಾನ್ಯ ಬಸ್‌ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಸರ್ಕಾರ ಶಕ್ತಿ ಯೋಜನೆಯಡಿ ಕಲ್ಪಿಸಿದೆ. ಆದರೆ ಇದೇ ಉಚಿತ ಬಸ್ ಸ್ಕೀಂನ ಬಂಡವಾಳ ಮಾಡಿಕೊಂಡು ಮಹಿಳಾ ಪ್ರಯಾಣಿಕರ ಆಭರಣಗಳನ್ನು ಕದಿಯುತ್ತಿದ್ದ ಖತರ್ನಾಕ್ ಲೇಡಿ ಗ್ಯಾಂಗ್ ಒಂದನ್ನು ಕಲಬುರಗಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ನಗರದಂಗರವಾಡಿ ಬಡಾವಣೆಯ ನಿವಾಸಿಗಳಾದ ಚಿಮನ್ ಕಾಂಬಳೆ, ಶಕೀಲಾಬಾಯಿ ಉಪಾಧ್ಯಾ ಮತ್ತು ಮಾಧುರಿ ಬಂಧಿತ ಆರೋಪಿಗಳಾಗಿದ್ದಾರೆ. ಕಳ್ಳತನವನ್ನೇ ಇವರು ವೃತ್ತಿ ಮಾಡಿಕೊಂಡಿದ್ದು, ರಾಜ್ಯ ಸರ್ಕಾರದ ಯೋಜನೆಗಾಗಿ ಇವರು ಬಂಡವಾಳ ಮಾಡಿಕೊಂಡಿದ್ದರು. ಕಲಬುರಗಿ ನಗರದಿಂದ ಜಿಲ್ಲೆಯ ಸೇಡಂ, ಶಹಾಬಾದ್ ಸೇರಿ ಹಲವೆಡೆ ಉಚಿತ ಪ್ರಯಾಣ ಮಾಡಿ ಕಳ್ಳತನ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ.

ಇದನ್ನೂ ಓದಿ: ಬಸ್ ನಲ್ಲಿದ್ದ 55 ಲಕ್ಷ ಕಳವು; ಸ್ಟೈಲ್ ನಲ್ಲಿ ಆರೋಪಿ ಅರೆಸ್ಟ್

ಬಸ್ ನಿಲ್ದಾಣಗಳಲ್ಲಿ ಚಿನ್ನಾಭರಣ ಧರಿಸಿದ್ದ ಮಹಿಳಾ ಪ್ರಯಾಣಿಕರು ಈ ಗ್ಯಾಂಗ್ ಅನ್ನು ಗಮನಿಸುತ್ತಿದ್ದಾರೆ. ಆ ಬಳಿಕ ಮಹಿಳಾ ಪ್ರಯಾಣಿಕರು ಬಸ್ ಹತ್ತುವ ವೇಳೆ ಎಂಟ್ರಿ ಕೊಡ್ತಿದ್ದ ಇವರು, ಅವರನ್ನು ಸುತ್ತುವರಿಯುತ್ತಿದ್ದರು. ಗಮನ ಬೆರೆಡೆ ಸೆಳೆದು ಚಿನ್ನದ ನೆಕ್ಲೇಸ್, ಪದಕ, ಉಂಗುರ, ಕಿವಿ ಓಲೆ, ಮಾಂಗಲ್ಯ ಸರಗಳನ್ನು ಕ್ಷಣಾರ್ಧದಲ್ಲಿ ಕಟ್ ಮಾಡಿ ಯಾರಿಗೂ ಅನುಮಾನ ಬಾರದಂತೆ ಎಸ್ಕೇಪ್ ವಸ್ತು ಆಗಿರಬೇಕು. ಹಲವು ತಿಂಗಳಿನಿಂದ ಮಹಿಳಾ ಪ್ರಯಾಣಿಕರನ್ನು ನಿದ್ದೆಗೆಡಿಸಿದ್ದ ಈ ಮೂವರು ಸರಗಳ್ಳಿಯರನ್ನು ಕೊನೆಗೂ ಖಾಕಿ ಹೆಡೆಮುರಿ ಕಟ್ಟಿದೆ.

ಸಿಸಿ ಕ್ಯಾಮರಾಗಳಲ್ಲಿ ಬಂಧಿತ ಆರೋಪಿಗಳ ಚಲನವಲನಗಳನ್ನು ಆಧರಿಸಿ ಆರೋಪಿ ಗ್ಯಾಂಗ್ ಭೇದಿಸಿದ್ದಾರೆ. ಇವರ ವಿರುದ್ಧ ಸೇಡಂ ಹಾಗೂ ಶಹಾಬಾದ್ ಠಾಣೆಯಲ್ಲಿ ಒಟ್ಟು ಮೂರು ಸರಗಳ್ಳತನ ಪ್ರಕರಣಗಳು ದಾಖಲಾಗಿವೆ. ಬಂಧಿತರಿಂದ ಬರೋಬ್ಬರಿ 14 ಲಕ್ಷದ 110 ಗ್ರಾಂ ಚಿನ್ನದ ಆಭರಣಗಳು, ನಗದು ಮತ್ತು ಕೃತ್ಯಕ್ಕೆ ಬಳಸಿರುವ ಉಪಕರಣಗಳನ್ನು ಜಪ್ತಿ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *