ದಾವಣಗೆರೆ, ಡಿ 15: ಕಾಂಗ್ರೆಸ್ ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ. ಬೆಳಗ್ಗೆ 7 ರಿಂದ 12 ರ ವರೆಗೆ ಶಾಮನೂರ ಪುತ್ರ ಸಚಿವ ಎಸ್ ಎಸ್ ಎಸ್ ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಪಾರ್ಥಿವ ಶರೀರ ಇರಲಿದೆ. ಅಭಿಮಾನಿಗಳು, ಕುಟುಂಬದವರಿಂದ ಅಂತಿಮ ನಮನ ಸಲ್ಲಿಸಬಹುದು ಎಂದು ಹೇಳಿದ್ದಾರೆ. ಸಂಜೆ 4 ಗಂಟೆಯವರೆಗೆ ನಗರದ ಹೃದಯ ಭಾಗವಾದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿದೆ. ಅಲ್ಲಿಂದ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಆನೆಕೊಂಡ ಶಾಮನೂರ ಮನೆತನದ ಕಲ್ಲೇಶ್ವರ ರೈಸ್ ಮಿಲ್ ಜಾಗಕ್ಕೆ ಕರೆತರಲಿಲ್ಲ. ಸಂಜೆ 5:30 ಸೂರ್ಯ ಮುಳುಗುವುದರೊಳಗೆ, ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರದ ನಂತರ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ