Headlines

'ಮೊಹಮ್ಮದ್ ಶಮಿ ಅನ್ಯಾಯ ಮಾಡುತ್ತಿದ್ದಾರೆ': ಟೀಂ ಇಂಡಿಯಾ ಸೆಲೆಕ್ಷನ್ ಬಗ್ಗೆ ಕಿಡಿ ಕಾರಿದ ಹೆಡ್‌ ಕೋಚ್!

'ಮೊಹಮ್ಮದ್ ಶಮಿ ಅನ್ಯಾಯ ಮಾಡುತ್ತಿದ್ದಾರೆ': ಟೀಂ ಇಂಡಿಯಾ ಸೆಲೆಕ್ಷನ್ ಬಗ್ಗೆ ಕಿಡಿ ಕಾರಿದ ಹೆಡ್‌ ಕೋಚ್!

'ಮೊಹಮ್ಮದ್ ಶಮಿ ಅನ್ಯಾಯ ಮಾಡುತ್ತಿದ್ದಾರೆ': ಟೀಂ ಇಂಡಿಯಾ ಸೆಲೆಕ್ಷನ್ ಬಗ್ಗೆ ಕಿಡಿ ಕಾರಿದ ಹೆಡ್‌ ಕೋಚ್!

ಮುಂಬೈ: ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ಮತ್ತೊಮ್ಮೆ ವೇಗಿ ಮೊಹಮ್ಮದ್ ಶಮಿ ಅವರನ್ನು ಕಡೆಗಣಿಸಲಾಗಿದೆ. ಈ ಕುರಿತಂತೆ ಹೆಡ್‌ಕೋಚ್ ಕಿಡಿಕಾರಿದ್ದಾರೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11ರಿಂದ ಆರಂಭವಾಗಲಿದ್ದು, ಈ ಮಹತ್ವದ ಸರಣಿಗೆ ಜನವರಿ 03ರಂದು ಅಜಿತ್‌ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿದೆ.

ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಗೆ ತಂಡದಿಂದ ಹೊರಬಿದ್ದಿದ್ದ ನಾಯಕ ಶುಭ್‌ಮನ್ ಗಿಲ್ ಹಾಗೂ ಉಪನಾಯಕ ಶ್ರೇಯಸ್ ಅಯ್ಯರ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.

ಆದರೆ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಮತ್ತೊಮ್ಮೆ ಕಡೆಗಣಿಸಲಾಗಿದೆ. ಶಮಿ ಕಿವೀಸ್ ಎದುರಿನ ಸರಣಿಗೆ ತಂಡ ಕೂಡಿಕೊಳ್ಳಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ.

ಇದೀಗ ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಹಾಗೂ ಶಮಿ ಪ್ರತಿನಿಧಿಸುವ ಬಂಗಾಳ ಕ್ರಿಕೆಟ್ ತಂಡದ ಹೆಡ್‌ಕೋಚ್ ಲಕ್ಷ್ಮಿ ರತನ್ ಶುಕ್ಲಾ ಬಿಸಿಸಿಐ ಆಯ್ಕೆ ಸಮಿತಿಯ ಮೇಲೆ ಕಿಡಿಕಾರಿದ್ದು, ಶಮಿಗೆ ಅನ್ಯಾಯ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆಯ್ಕೆ ಸಮಿತಿಯು ಶಮಿಗೆ ಅನ್ಯಾಯ ಮಾಡುತ್ತಿದೆ. ಯಾವೊಬ್ಬ ಅಂತಾರಾಷ್ಟ್ರೀಯ ಕ್ರಿಕೆಟಿಗನೂ ಗಾಯದ ಸಮಸ್ಯೆಯ ಬಳಿಕ ಇಷ್ಟೊಂದು ದೇಶಿ ಕ್ರಿಕೆಟ್ ಪಂದ್ಯಗಳನ್ನು ಆಡಿಲ್ಲ. ದೇಶಿ ಕ್ರಿಕೆಟ್‌ನಲ್ಲಿ ಇಷ್ಟೆಲ್ಲಾ ಪಂದ್ಯಗಳನ್ನಾಡಿದ ಬಳಿಕವೂ ಶಮಿ ಅವರನ್ನು ಕಡೆಗಣಿಸಿದ್ದರ ಬಗ್ಗೆ ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಎಂದು ಲಕ್ಷ್ಮಿ ರತನ್ ಶುಕ್ಲಾ ಕಿಡಿಕಾರಿದ್ದಾರೆ.

2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ ಮೊಹಮ್ಮದ್ ಶಮಿ ಕೊನೆಯ ಬಾರಿಗೆ ಭಾರತ ತಂಡವನ್ನು ಕೊನೆಯ ಬಾರಿಗೆ ಪ್ರತಿನಿಧಿಸಿದ್ದರು. ಆ ಟೂರ್ನಿಯಲ್ಲಿ 9 ವಿಕೆಟ್ ಕಬಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದಾದ ಬಳಿಕ ಆಸ್ಟ್ರೇಲಿಯಾ ಎದುರಿನ ಸರಣಿ, ದಕ್ಷಿಣ ಆಫ್ರಿಕಾ ಎದುರಿನ ಸೀಮಿತ ಓವರ್‌ಗಳ ಸರಣಿಯಿಂದ ಶಮಿ ಅವರನ್ನು ಕೈಬಿಡಲಾಗಿತ್ತು. ಇದೀಗ ಬುಮ್ರಾ ಅನುಪಸ್ಥಿತಿಯಲ್ಲಿ ಶಮಿ ಕಿವೀಸ್ ಎದುರಿನ ಸರಣಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ.

ದೇಶಿ ಕ್ರಿಕೆಟ್‌ನಲ್ಲಿ ಶಮಿ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿ 11 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದಕ್ಕೂ ಮೊದಲು ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿ 13 ವಿಕೆಟ್ ಕಬಳಿಸಿದ್ದಾರೆ.

ದೇಶಿ ಕ್ರಿಕೆಟ್‌ನಲ್ಲಿ ಅದ್ಭುತ ಲಯ ಹಾಗೂ ಫಿಟ್ನೆಸ್ ಹೊಂದಿದ್ದರೂ ಶಮಿ ಅವರನ್ನು ಕಡೆಗಣಿಸಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Source link

Leave a Reply

Your email address will not be published. Required fields are marked *