ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ

ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ


ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಬೆದರಿಕೆ ಹಾಕಿರುವ ಪ್ರಕರಣ (ಶಿಡ್ಲಘಟ್ಟ ಬೆದರಿಕೆ ಪ್ರಕರಣ) ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ (ರಾಜೀವ್ ಗೌಡ) ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. 14 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಬಂಧಿಸುವಲ್ಲಿ ಶಿಡ್ಲಘಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ರಾಜೀ ಗೌಡನಿಗೆ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್ ನನ್ನನ್ನು ಸಹ ಬಂಧಿಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ಸೆ,
ಕೇರಳದ ಪ್ರಮುಖ ಆರೋಪಿ ರಾಜೀವ್ ಗೌಡನನ್ನು ಬಂಧಿಸಲಾಗಿದೆ. ರಾಜೀವ್ ಗೌಡ ಜೊತೆಗಿದ್ದ ಮೈಕಲ್ ನನ್ನೂ ಬಂಧಿಸಲಾಗಿದೆ. ಆರೋಪಿ ಬಂಧನಕ್ಕೆ 3 ಪೊಲೀಸರ ತಂಡವನ್ನು ರಚಿಸಲಾಗಿದೆ.ವಿವಿಧ ಜಿಲ್ಲೆಗಳ ಪೊಲೀಸರ ಸಹಕಾರದೊಂದಿಗೆ ತನಿಖೆ ನಡೆಸಲಾಗಿದೆ. ಮಂಗಳೂರಿನಿಂದ ಕೇರಳಕ್ಕೆ ಹೋಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಕೆಎ 03, ಎಂಎಕ್ಸ್ 9108 ಕಾರಿನಲ್ಲಿ ಪರಾರಿಯಾಗಿದ್ದ ರಾಜೀವ್ ಗೌಡ ಕಾರನ್ನು ಫಾಲೋ ಮಾಡಿ ಇಬ್ಬರನ್ನು ಬಂಧಿಸಲಾಗಿದೆ. ಪೊಲೀಸರಿಂದ ಯಾವುದೇ ವಿಷಯಗಳು, ಮಾಹಿತಿ ಸೋರಿಕೆ ಆಗಿಲ್ಲ. ನಮ್ಮ ಪೊಲೀಸರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಪೊಲೀಸರಿಂದ ಯಾವುದೇ ನಿರ್ಲಕ್ಷ್ಯ ಆಗಿಲ್ಲ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *