ಶ್ರೀ ಕೃಷ್ಣ ಮಠದ ಇತಿಹಾಸದಲ್ಲಿ 253ನೇ ದ್ವೈವಾರ್ಷಿಕ ಪರ್ಯಾಯವಾಗಿದೆ, ವೇದವರ್ಧನ ತೀರ್ಥರ ಪ್ರಥಮ ಪರ್ಯಾಯವಾಗಿದೆ. ಮಧ್ಯರಾತ್ರಿ 1.30ಕ್ಕೆ ಕಾಪು ತಾಲ್ಲೂಕಿನ ದಂಡ ತೀರ್ಥದಲ್ಲಿ ಪವಿತ್ರ ನಡೆದು, ಬೆಳಗಿನ ಜಾವ ಸ್ನಾನ 3 ಗಂಟೆಗೆ ಜೋಡುಕಟ್ಟೆಯಿಂದ ವೈಭವದ ಪರ್ಯಾಯ ಮೆರವಣಿಗೆ ಪ್ರಾರಂಭವಾಗಿದೆ. ನೂರಕ್ಕೂ ಅಧಿಕ ಸಾಂಸ್ಕೃತಿಕ ತಂಡಗಳು, ಟ್ಯಾಬ್ಲೋಗಳು, ಭಜನಾ ತಂಡಗಳು ಈ ವೇಳೆ ಗಮನ ಸೆಳೆದಿವೆ.