ಉಡುಪಿ, ಫೆ.10: ಕಾಪು ತಾಲೂಕಿನ ಶಿರ್ವ ಎಂಬಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯದಿಂದ ಚಾಲಕ ಸೇರಿದಂತೆ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಶಿರ್ವ ಕಡೆ ಬರುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರು ನಡು ರಸ್ತೆಯಲ್ಲಿ ಸುತ್ತು ಕರಕಲಾಗಿದೆ. ಬೆಂಕಿಯೂ ಎಂಜಿನ್ ಭಾಗದಲ್ಲಿ ಮೊದಲು ಕಾಣಿಸಿಕೊಂಡ ಹೊಗೆ ಬಂದಿದೆ. ಇದನ್ನು ನೋಡಿ ಚಾಲಕ ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾನೆ. ಕಾರಿನಿಂದ ಎಲ್ಲರೂ ಇಳಿಯುವಾಗ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪೈಪ್ ಮೂಲಕ ಬೆಂಕಿ ನಂದಿಸಲು ಸ್ಥಳೀಯರ ಪ್ರಯತ್ನವನ್ನು ಮಾಡಲಾಗಿದೆ. ಚಾಲಕನ ಸಮಯದಿಂದ ಕುಟುಂಬದ ಜೀವ ಉಳಿದಿದೆ. ಈ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಕಾರಣವೇನು ಎಂಬುದು ತಿಳಿದು ಬಂದಿಲ್ಲ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ