ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ, ಕೊಡಚಾದ್ರಿ ಸರ್ಕಾರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ರಚನಾ (20) ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ.

ಶಿವಮೊಗ್ಗ (ಡಿ.17): ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ವಸವೆ ಗ್ರಾಮದಲ್ಲಿ ನಡೆದಿದೆ.

ಹೊಸನಗರ ತಾಲೂಕಿನ ವಸವೆ ಗ್ರಾಮದ ನಿವಾಸಿ ರಚನಾ (20) ಆತ್ಮ*ಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಹೊಸನಗರದ ಪ್ರತಿಷ್ಠಿತ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ಪ್ರತಿದಿನದಂತೆ ನಿನ್ನೆ ಕೂಡ ಕಾಲೇಜಿಗೆ ಹೋಗಿ ಸಂಜೆ ಮನೆಗೆ ಮರಳಿದ್ದಳು ಎನ್ನಲಾಗಿದೆ.

ರಚನಾ ಕಾಲೇಜಿನಿಂದ ಮನೆಗೆ ಬಂದ ಸಮಯದಲ್ಲಿ ಕುಟುಂಬದ ಸದಸ್ಯರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಇದೇ ಸಮಯವನ್ನು ಬಳಸಿಕೊಂಡ ವಿದ್ಯಾರ್ಥಿನಿ, ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಮನೆಯವರು ಮರಳಿ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಗಾಬರಿಗೊಂಡ ಕುಟುಂಬಸ್ಥರು ರಕ್ಷಣೆಗೆ ಮುಂದಾದರೂ ಅಷ್ಟರಲ್ಲಾಗಲೇ ರಚನಾ ಕೊನೆಯುಸಿರೆಳೆದಿದ್ದಳು.

ವಿದ್ಯಾಭ್ಯಾಸ, ಆಟ-ಪಾಠ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಚುರುಕಾಗಿದ್ದ ವಿದ್ಯಾರ್ಥಿನಿ ರಚನಾ ಆತ್ಮ*ಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದೆ.

ಮನೆಯಲ್ಲಾಗಲಿ ಅಥವಾ ಕಾಲೇಜಿನಲ್ಲಾಗಲಿ ಯಾವುದೇ ರೀತಿಯ ತೊಂದರೆ ಇತ್ತೇ? ಅಥವಾ ಇನ್ಯಾವುದೇ ವೈಯಕ್ತಿಕ ವಿಚಾರಕ್ಕೆ ಆಕೆ ಮನನೊಂದಿದ್ದಳೇ? ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

ಹೊಸನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಭರವಸೆಯ ವಿದ್ಯಾರ್ಥಿನಿಯ ಸಾವಿನಿಂದ ವಸವೆ ಗ್ರಾಮ ಹಾಗೂ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶೋಕ ಮಡುಗಟ್ಟಿದೆ.

Source link
Shivamogga News: ಹೊಸನಗರ ಕಾಲೇಜು ಪ್ರತಿಭಾವಂತ ವಿದ್ಯಾರ್ಥಿನಿ ರಚನಾ ನೇಣಿಗೆ ಶರಣು!