ಮೃತ ಸ್ವಾತಿ, ಪೊಲೀಸ್ ಚಿತ್ರ ಕ್ರೆಡಿಟ್ ಮೂಲ: tv9 ಕನ್ನಡ
ಶಿವಮೊಗ್ಗ, ಫೆಬ್ರವರಿ 20: ಪೊಲೀಸಪ್ಪನ (ಪೊಲೀಸ್) ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ (ಆತ್ಮಹತ್ಯೆ) ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸ್ವಾತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಮೋಹನ್ ಹೆಸರು ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಇನ್ನು ತಂದೆ ತಾಯಿ ಸಾವಿನಿಂದ ಹೆಣ್ಣು ಮಕ್ಕಳಿಬ್ಬರು ಅನಾಥವಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಮೃತಳ ಹೆತ್ತವರು ಟಾರ್ಚರ್ ಕೊಟ್ಟ ಪೊಲೀಸ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ನಡೆದಿದ್ದೇನು?
ಸ್ವಾತಿಗೆ ಮದುವೆ ಆಗಿ 7 ವರ್ಷವಾಗಿತ್ತು. ಒಂದು ವಾರದ ಹಿಂದಷ್ಟೇ ಪತಿ ಜಗದೀಶ್ ಅನಾರೋಗ್ಯದಿಂದ ಬಳಲುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಪೊಲೀಸ್ ಮೋಹನ್, ಸ್ವಾತಿಗೆ ಫೇಸ್ ಬುಕ್ ನಲ್ಲಿ ಮೆಸೇಜ್ ಮಾಡಿದ್ದ. ಆತನ ಅಕೌಂಟ್ ಅನ್ನು ಸ್ವಾತಿ ಬ್ಲಾಕ್ ಮಾಡಲಾಗಿತ್ತು. ಇದಕ್ಕೆ ಕೋಪಗೊಂಡ ಪೊಲೀಸರು ಬೇರೆ ಅಕೌಂಟ್ ನಿಂದ ಸ್ವಾತಿ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಬಳಿಕ ಈತನ ಕಾಟ ತಾಳಲಾರದೆ ಸ್ವಾತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯೂ ಟೌನ್ ಪೊಲೀಸ್ ಠಾಣೆ ಘಟನೆ ನಡೆದಿದೆ.
ಡೆತ್ ನೋಟ್ ನಲ್ಲಿ ಏನಿದೆ?
ಸ್ವಾರಿ ಅಮ್ಮ. ನನ್ನ ಬಗ್ಗೆ ಇಲ್ಲದೆ ಇರುವುದು ಎಲ್ಲಾ ಕೆಟ್ಟದಾಗಿ ಜನಗಳ ಹತ್ತಿರ ಮೋಹನ್ ಹೇಳಿದರು. ನನಗೆ ತಡಿಯಕ್ಕೆ ಆಗುತ್ತಿಲ್ಲ. ನನ್ನ ಗಂಡ ಸತ್ತಿದ್ದು ಫುಲ್ ಡ್ರಿಂಕ್ಸ್ ಮಾಡಿ. ಈ ಮೋಹನ್ ಎಂಬ ಪೊಲೀಸ್ ನನ್ನ ಬಗ್ಗೆ ಕೆಟದಾಗಿ ಜನಗಳ ಹತ್ತಿರ ಏನೇನೋ ಹೇಳಿರುವುದು ನನಗೆ ಈಗ ಬೆಳಿಗ್ಗೆ ವಿಷಯ ಗೊತ್ತಾಯ್ತು. ಅವನಿಗೆ ಮಾತ್ರ ಸಮ್ಮನೇ ಬಿಡಬೇಡಿ.
ಇದನ್ನೂ ಓದಿ: ಗಂಡ ಫಾರಿನ್ ಟ್ರಿಪ್ ಕಳಿಸಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು?
ಅವರು ಯಾರು ಅಂತಾನೆ ನಂಗೆ ಗೊತ್ತಿಲ್ಲ. ಫೇಸ್ಬುಕ್ನಲ್ಲಿ ಮೆಸೇಜ್ ಮಾಡಿದ್ದರು. ನಾನು ಬ್ಲಾಕ್ ಮಾಡಿದೆ. ಅದೇ ಸಿಟ್ಟಿಗೆ ಏನೇನೋ ಹೇಳಿದ್ದಾರೆ. ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ. ದಯವಿಟ್ಟು ಸ್ವಾರಿ ಅಮ್ಮ ಎಂದು ಸ್ವಾತಿ ಡೆತ್ ನೋಟ್ ಬರೆದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.