ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್


ಸೋಶಿಯಲ್ ಮೀಡಿಯಾದಲ್ಲಿ ಕೆಲವು ಕಿಡಿಗೇಡಿಗಳು ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ದೂರು ನೀಡಿದ್ದಾರೆ. ಈ ಮೊದಲು ನಟಿ ರಮ್ಯಾಗೆ ಇದೇ ರೀತಿ ಕೆಟ್ಟ ಕಮೆಂಟ್ ಬಂದಿತ್ತು. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವರಾಜ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಫ್ಯಾನ್ಸ್ ವಾರ್ ನಿಲ್ಲಿಸಬೇಕು. ಇದನ್ನು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಎಲ್ಲ ಅಭಿಮಾನಿಗಳಲ್ಲಿ ನಾನು ಕೇಳಿಕೊಳ್ಳುತ್ತೇನೆ. ಒಬ್ಬರಿಂದ ಯಾರಿಗೆ ಆ ಕಿಡಿ ಹಾರಬಾರದು. ಅದು ತುಂಬಾ ಅಪಾಯಕಾರಿ. ಅಂಥ ಕಮೆಂಟ್ ಮಾಡಿದರೆ ಪೊಲೀಸ್ ಕೇಸ್ ಆಗುತ್ತದೆ. ಯಾಕೆ ಇದೆಲ್ಲ. ಎಲ್ಲರಿಗೂ ಕುಟುಂಬ ಇರುತ್ತದೆ. ಯಾವ ಹೆಣ್ಣಿನ ಬಗ್ಗೆ ಆದರೂ ಕೆಟ್ಟ ಕಮೆಂಟ್ ಮಾಡುವುದು ತಪ್ಪು. ಮಹಿಳೆಯರನ್ನು ಗೌರವಿಸಬೇಕು’ ಎಂದು ಶಿವರಾಜ್ ಕುಮಾರ್ (ಶಿವರಾಜಕುಮಾರ್) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *