ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಮತ್ತೆ ಮೈದಾನಕ್ಕಿಳಿದಿದ್ದಾರೆ. ಅದು ಕೂಡ ಬರೋಬ್ಬರಿ 60 ದಿನಗಳ ನಂತರ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ವೇಳೆ ಅಯ್ಯರ್ ಅಕ್ಟೋಬರ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಅವರು ಬೆಂಗಳೂರಿನ ಸಿಒಐ ಮೈದಾನದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
ಶ್ರೇಯಸ್ ಅಯ್ಯರ್ 2 ತಿಂಗಳ ಬಳಿಕ ನೆಟ್ಸ್‌ನಲ್ಲಿ ಅಭ್ಯಾಸ ನಡೆಸಿದ್ದು, ಹೀಗಾಗಿ ಮುಂಬರುವ ನ್ಯೂಝಿಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದ ಮುನ್ನ ಅವನ ವಿಜಯ ಹಝಾರೆಗೂ ಸ್ಪರ್ಧೆಯಲ್ಲಿ ಕಣಕ್ಕಿಳಿಯ. ಹೀಗಾಗಿಯೇ ಇದೀಗ ನೆಟ್ಸ್‌ನಲ್ಲಿ ಬೆವರಿಳಿಸುತ್ತಿದ್ದಾರೆ.
ಶ್ರೇಯಸ್ ಅಯ್ಯರ್ಗೆ ಏನಾಗಿತ್ತು?
ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಕಾರ್ಯದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್ವರ್ಡ್ ಪಾಯಿಂಟ್ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು.
ಇದೀಗ ಸಂಪೂರ್ಣವಾಗಿ ಫಿಟ್ನೆಸ್ ಸಾಧಿಸಿರುವ ಶ್ರೇಯಸ್ ಅಯ್ಯರ್ ಅಭ್ಯಾಸ ಶುರುವಾಗಿದೆ. ಹೀಗಾಗಿ ಜನವರಿ 11 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧ ಸರಣಿಯಲ್ಲಿ ಅವರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.