ಭಾರತ ಮತ್ತು ಸೌತ್ ಆಫ್ರಿಕಾ (ಭಾರತ vs ದಕ್ಷಿಣ ಆಫ್ರಿಕಾ) ನಡುವಣ ಸರಣಿಯು ನವೆಂಬರ್ 14 ರಿಂದ ಶುರುವಾಗಿದೆ. ಈ ಸರಣಿಯಲ್ಲಿ ಮೊದಲ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಾಗುತ್ತಿದೆ, ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತದೆ.
ಏಕದಿನ ಸರಣಿಯು ನವೆಂಬರ್ 30 ರಿಂದ ಪ್ರಾರಂಭವಾಗಲಿದೆ, ಈ ಸರಣಿಯ ಟೀಮ್ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಅಯ್ಯರ್ ಇದೀಗ ಯಶಸ್ವಿಯಾಗಿದ್ದಾರೆ.
ಇನ್ನೂ ಹಲವಾರು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಮೂರು ಮ್ಯಾಚ್ಗಳ ಏಕದಿನ ಸರಣಿಯಿಂದ ಹೊರಗುಳಿಯಲಿದೆ ಎಂದು ವರದಿಯಾಗಿದೆ. ಇನ್ನು ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದರೆ ಅವರು ಐಪಿಎಲ್ ಮೂಲಕ ಕಂಬ್ಯಾಕ್ ಮಾಡಬಹುದು.
ಏಕೆಂದರೆ ಫೆಬ್ರವರಿ-ಮಾರ್ಚ್ನಲ್ಲಿ ನಡೆಯಲಿರುವ ಟಿ20 ನಿಂದ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿಲ್ಲ. ಹೀಗಾಗಿ ಮಾರ್ಚ್ ದ್ವಿತೀಯ ವಾರದಿಂದ ಪ್ರಾರಂಭವಾಗುವ ಐಪಿಎಲ್ ಸೀಸನ್-19 ರ ಮೂಲಕ ಶ್ರೇಯಸ್ ಅಯ್ಯರ್ ಕಂಬ್ಯಾಕ್ ಮಾಡುವ ನಿರೀಕ್ಷೆಯಿದೆ.
ಪ್ರಸ್ತುತ ಭಾರತ ಏಕದಿನ ತಂಡ : ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್, ಶ್ರೇಯಸ್.




