ಮೇಲೆ ಹೇಳಿದಂತೆ ಜನವರಿ 11 ರಿಂದ ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಶುಭಮನ್ ಗಿಲ್ ತಂಡವು ಮುನ್ನಡೆಯಲಿದೆ, ಆದರೆ ಅವರ ಫಾರ್ಮ್ ಪ್ರಸ್ತುತ ಕಳಪೆಯಾಗಿದೆ. ಗಿಲ್ ಅವರ ದೊಡ್ಡ ಸಮಸ್ಯೆ ಎಂದರೆ ಟಿ20 ಮತ್ತು ಏಕದಿನ ಮಾದರಿಗಳಲ್ಲಿ ಅವರ ಕಳಪೆ ಪ್ರದರ್ಶನ. ಫೆಬ್ರವರಿ 20, 2025 ರಿಂದ ಗಿಲ್ ಏಕದಿನ ಪಂದ್ಯಗಳಲ್ಲಿ ಒಂದು ಅರ್ಧಶತಕವನ್ನೂ ಬಾರಿಸಿಲ್ಲ. ತಮ್ಮ ಕೊನೆಯ ಎಂಟು ಏಕದಿನ ಇನ್ನಿಂಗ್ಸ್‌ಗಳಲ್ಲಿ ರನ್ ಬರ ಎದುರಿಸುತ್ತಿರುವ ಗಿಲ್ ಅವರ ಅತ್ಯುತ್ತಮ ಸ್ಕೋರ್ ಕೇವಲ 46 ರನ್ ಆಗಿದೆ.