ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಿಂದ ಹೊರಬಿದ್ದ ಶುಭ್‌ಮನ್ ಗಿಲ್‌ಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆಯಿದೆ. ಗಿಲ್‌ಗೆ ಏಕದಿನ ತಂಡದ ನಾಯಕತ್ವವೂ ಕೈತಪ್ಪುವ ಸಾಧ್ಯತೆಯಿದೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.

ಶುಭ್‌ಮನ್ ಗಿಲ್ 2025ರ ಮಧ್ಯದಲ್ಲಿ ಭಾರತ ಏಕದಿನ ತಂಡದ ನಾಯಕನಾಗಿ ಅಧಿಕೃತವಾಗಿ ನೇಮಕವಾಗಿದ್ದಾರೆ. ಸದ್ಯ ಶ್ರೇಯಸ್ ಅಯ್ಯರ್ ಏಕದಿನ ತಂಡದ ಉಪನಾಯಕರಾಗಿದ್ದಾರೆ.

ಇದೀಗ ಡಿಸೆಂಬರ್ 20ರಂದು ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಿದಾಗ ಉಪನಾಯಕರಾಗಿದ್ದ ಶುಭ್‌ಮನ್ ಗಿಲ್ ಅವರನ್ನು ಕೈಬಿಡಲಾಗಿದೆ. ಇದು ಸಾಕಷ್ಟು ಅಚ್ಚರಿಗೆ ಕಾರಣವಾಗಿತ್ತು.

ಇನ್ನು ಇದೆಲ್ಲದರ ನಡುವೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮತ್ತೊಂದು ಸುದ್ದಿ ಹರಿದಾಡುತ್ತಿದ್ದು, ಭಾರತ ಏಕದಿನ ತಂಡದ ನಾಯಕತ್ವದಿಂದ ಶುಭ್‌ಮನ್ ಗಿಲ್ ಅವರನ್ನು ಕೆಳಗಿಳಿಸಿ ಶ್ರೇಯಸ್ ಅಯ್ಯರ್‌ಗೆ ಕ್ಯಾಪ್ಟನ್ ಪಟ್ಟ ಕಟ್ಟಲಾಗುತ್ತದೆ ಎನ್ನುವ ಸುದ್ದಿ ವೈರಲ್ ಆಗುತ್ತಿದೆ.

ಗಿಲ್ ನಾಯಕರಾದ ಬಳಿಕ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅವರ ಬ್ಯಾಟಿಂಗ್ ಪ್ರದರ್ಶನದಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿದೆ. ಗಿಲ್ ನಾಯಕತ್ವದ ಜತೆಗೆ ಬ್ಯಾಟರ್ ಆಗಿ ಒತ್ತಡ ನಿಭಾಯಿಸಲು ವಿಫಲವಾಗುತ್ತಿರುವುದು ಬಿಸಿಸಿಐ ಆಯ್ಕೆ ಸಮಿತಿ ತಲೆನೋವು ಹೆಚ್ಚುವಂತೆ ಮಾಡಿದೆ.

ಹೀಗಾಗಿ ಗಿಲ್ ಅವರನ್ನು ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿಸಿ ಶ್ರೇಯಸ್ ಅಯ್ಯರ್‌ಗೆ ನಾಯಕತ್ವ ಪಟ್ಟ ಕಟ್ಟಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಶ್ರೇಯಸ್ ಅಯ್ಯರ್ ನಾಯಕನಾಗಿ ಐಪಿಎಲ್‌ನಲ್ಲಿ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಿದ್ದಾರೆ. ಇದರ ಜತೆಗೆ ಏಕದಿನ ಕ್ರಿಕೆಟ್‌ನಲ್ಲಿ ಅಯ್ಯರ್ ಸ್ಥಿತ ಬ್ಯಾಟಿಂಗ್ ಪ್ರದರ್ಶನ ನೀಡುತ್ತಾ ಬಂದಿದ್ದಾರೆ.

ಇನ್ನು ಇತ್ತೀಚೆಗೆ ಗಾಯದ ಸಮಸ್ಯೆಯಿಂದ ಶ್ರೇಯಸ್ ಅಯ್ಯರ್ ಹಾಗೂ ಶುಭ್‌ಮನ್ ಗಿಲ್ ಭಾರತ ಏಕದಿನ ತಂಡದಿಂದ ಹೊರಗುಳಿದಿದ್ದರು. ಈ ವೇಳೆ ಕೆ ಎಲ್ ರಾಹುಲ್ ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಯಲ್ಲಿ ಹಂಗಾಮಿ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದರು.

ಆದರೆ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಶುಭ್‌ಮನ್ ಗಿಲ್ ಬದಲಿಗೆ ಮುಂಬೈ ಮೂಲದ ಶ್ರೇಯಸ್ ಅಯ್ಯರ್‌ಗೆ ಬಿಸಿಸಿಐ ಭಾರತ ಏಕದಿನ ತಂಡದ ನಾಯಕತ್ವ ಕಟ್ಟಲು ಮುಂದಾಗಿದೆ ಎನ್ನಲಾಗುತ್ತಿದೆ.

Source link
ಶುಭ್‌ಮನ್ ಗಿಲ್ ನಾಯಕತ್ವಕ್ಕೆ ಕುತ್ತು? ಭಾರತ ಏಕದಿನ ತಂಡಕ್ಕೆ ಹೊಸ ನಾಯಕ ಎಂಟ್ರಿ?