ಕಾರವಾರ, ಫೆಬ್ರವರಿ 04: ಉತ್ತರ ಕನ್ನಡದ ಸಿದ್ದಾಪುರದಲ್ಲಿ ನಡೆದ ಹತ್ಯೆ ಪ್ರಕರಣ ಸಂಬಂಧ ಎ1 ಸುಚಿತ್ರಾ, ಇ2 ಲೋಕನಾಥ್, ಇ3 ಜ್ಯೋತಿಷಿ ಕಮಲಾಕರ ಭಟ್ ಮತ್ತು E4 ಆಕಾಶ್‌ರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಸಿದ್ದಾಪುರ ಜೆಎಂಎಫ್‌ಸಿ ಕೋರ್ಟ್ ಆದೇಶ ನೀಡಿದೆ. ಮತ್ತೊಂದೆಡೆ ಕೊಲೆ ಪ್ರಕರಣ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗ್ರಾಮಸ್ಥರು ಸಿದ್ದಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಕಮಲಾಕರ್ ಭಟ್ ಅವರನ್ನು ಹತ್ತು ನಿಮಿಷಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಸೂಚಿಸಿದ್ದಾರೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆಗಿನ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧವೇ ಈ ಪ್ರಕರಣಕ್ಕೆ ಮೂಲ ಕಾರಣ. ಇದೇ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ವಸಂತ್ ಎಂಬುವವರ ಕೊಲೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.