
ಬೆಂಗಳೂರು, ಮಾರ್ಚ್ 6: ದಾಖಲೆಯ 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ (ಕರ್ನಾಟಕ ಬಜೆಟ್ 2026) ಮಂಡನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಲ, ಜಿಡಿಪಿ ವೃದ್ಧಿ, ವಿತ್ತೀಯ ಕೊರತೆ, ಹಣಕಾಸು ಶಿಸ್ತು ಇತ್ಯಾದಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಸಾಲ, ಜಿಎಸ್‌ಟಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಹೇಗೆ ಅನ್ಯಾಯವಾಗುತ್ತಿದೆ ಎಂದು ವಿವರಿಸಿದ್ದಾರೆ.
ರಾಜ್ಯ ಸರ್ಕಾರ ಸಾಲದ ಮೇಲೆ ಸಾಲ ಮಾಡುತ್ತಿದೆ ಎಂದು ಬಿಜೆಪಿ ಆರೋಪವನ್ನು ಸಿದ್ದರಾಮಯ್ಯ ಅಲ್ಲಗಳೆದಿದ್ದಾರೆ. ಅಭಿವೃದ್ಧಿ ಕೆಲಸಗಳಿಗೆ ಸಾಲ ಮಾಡುವುದು ಅನಿವಾರ್ಯ ಎಂಬ ಸಂಗತಿಯನ್ನು ತಿಳಿಸಿರುವ ಅವರು ಇತಿಮಿತಿಯಲ್ಲೇ ಸಾಲ ಮಾಡುವುದನ್ನು ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ಸಾಲ 212 ಲಕ್ಷ ಕೋಟಿ ರೂಗೆ ಏರುವ ಅಂದಾಜು ಇದೆ. ಅದು ಜಿಡಿಪಿಯ ಶೇ. 55ಕ್ಕಿಂತ ಹೆಚ್ಚು. ತಾವು ಪರಿಮಿತಿಯಲ್ಲೇ ಸಾಲ ಮಾಡಿದ್ದೇವೆ.
ನಾವು ಅಧಿಕಾರಕ್ಕೆ ಬಂದಾಗ ಸಾಲ 5.54 ಲಕ್ಷ ಕೋಟಿ ರೂ ಸಾಲ ಇತ್ತು. ಈಗ ಸಾಲ 8.14 ಲಕ್ಷ ಕೋಟಿ ರೂ ಆಗುತ್ತದೆ. ಫಿಸ್ಕಲ್ ರೆಸ್ಪಾನ್ಸಿಬಲ್ ಆಯಕ್ಟ್ ಪ್ರಕಾರ ವಿತ್ತೀಯ ಕೊರತೆ ಜಿಡಿಪಿಯ ಶೇ. 3ರ ಒಳಗೆ ಇರಬೇಕು. ಸಾಲವು ಶೇ. 25ರ ಒಳಗೆ ಇರಬೇಕು. ಕರ್ನಾಟಕದ ಜಿಡಿಇಪಿ ಮುಂದಿನ ವರ್ಷ 33 ಲಕ್ಷ ಕೋಟಿ ರೂ ಆಗುತ್ತದೆ. ಹೀಗಾಗಿ, ಕಾಯ್ದೆ ವಿಧಿಸಿರುವ ಮಿತಿಯೊಳಗೆಯೇ ಸಾಲ ಮಾಡಲಾಗದೆ ಎಂದು ಸಿದ್ದರಾಮಯ್ಯ ತಮ್ಮ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: karnataka budget 2026: ಈ ಬಾರಿಯ ಬಜೆಟ್‌ನಲ್ಲಿ ಘೋಷಣೆಯಾಗಿರುವ ಹೊಸ ಕಾರ್ಯಕ್ರಮಗಳು
ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಈ ವೇಳೆ ಸಿದ್ದರಾಮಯ್ಯ ಮತ್ತೆ ಆರೋಪ ಮಾಡಿದ್ದಾರೆ. ಜಿಎಸ್ಟಿ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರ ನಾವು ಎರಡನೇ ಸ್ಥಾನದಲ್ಲಿದ್ದೇವೆ. ಆದರೆ, ಕರ್ನಾಟಕಕ್ಕೆ ಜಿಎಸ್ ಟಿ ಪಾಲು ನ್ಯಾಯಯುತವಾಗಿ ಸಿಕ್ಕಿಲ್ಲ. ಈ ವರ್ಷ ನಮಗೆ ಜಿಎಸ್ಟಿ ಹಂಚಿಕೆಯಲ್ಲಿ 10,000 ಕೋಟಿ ರೂ ಕೊರತೆಯಾಗಿದೆ. ಮುಂದಿನ ವರ್ಷ 15,000 ಕೋಟಿ ರೂ ಕಡಿಮೆ ಆಗುವ ಅಂದಾಜು ಇದೆ. ಕಡಿಮೆ ಜಿಎಸ್ಟಿ ಸಿಕ್ಕಿದೆ ಕರ್ನಾಟಕದ ಬೆಳವಣಿಗೆ ಶೇ. 4 ಕಡಿಮೆ ಆಯಿತು. ಆದರೂ ಕೂಡ ಜಿಡಿಪಿ ಬೆಳವಣಿಗೆ ಶೇ. 8.10 ಇದೆ ಎಂದು ಮುಖ್ಯಮಂತ್ರಿಗಳು ವಿವರಿಸಿದ್ದಾರೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ