ಬೆಂಗಳೂರು, (ನವೆಂಬರ್ 28): ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಹುದ್ದಾಟ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಕರ್ನಾಟಕ ಕಾಂಗ್ರೆಸ್‌ನಲ್ಲಿ ಕುರ್ಚಿ ಗುದ್ದಾಟ ದಿನಕ್ಕೊಂದು ತಿರುವು, ಕ್ಷಣಕ್ಕೊಂದು ದಿಕ್ಕು ಬದಲಿಸಿದೆ. ಕುರ್ಚಿ ಗುದ್ದಾಟ ತಾರಕಕ್ಕೇರಿದ್ದು, ಸಿಎಂ ಮತ್ತು ಡಿಸಿಎಂ ಬಣಗಳ ತಂತ್ರ ಪ್ರತಿತಂತ್ರ ಜೋರಾಗಿದೆ. ಹೀಗಾಗಿ ಕೈ ಪಾಳೆಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗುದ್ದಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಈ ತಿಂಗಳಾಂತ್ಯಕ್ಕೆ ಅಥವಾ ಡಿಸಿಎಂಬರ್ ಮೊದಲ ವಾರದೊಳಗೆ ಹೈಕಮಾಂಡ್ ಈ ಬಿಕ್ಕಟ್ಟಿಗೆ ಪರಿಹಾರ ರೂಪಿಸುವ ಸಾಧ್ಯತೆಗಳಿವೆ.
ಸೋನಿಯಾ ಗಾಂಧಿ ಇಂದು (ನವೆಂಬರ್ 28) ರಾತ್ರಿ ವಿದೇಶದಿಂದ ಹಿಂದಿರುಗಲಿದ್ದಾರೆ, ಭಾನುವಾರ ಸಂಜೆ ಕಾಂಗ್ರೆಸ್ ನ ಹಿರಿಯ ನಾಯಕರು ಸಭೆ ಸೇರಲಿದ್ದಾರೆ. ಸೋನಿಯಾ ಗಾಂಧಿ, ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಸಭೆ ನಡೆಸಿದರು, ಈ ಸಭೆಯಲ್ಲಿ ರಾಜ್ಯದ ನಾಯಕತ್ವ ಗೊಂದಲದ ವಿಚಾರದ ಬಗ್ಗೆ ಚರ್ಚೆ ನಡೆಯಿತು. ಇನ್ನು ಈ ಸಭೆ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ದೆಹಲಿಗೆ ಕರೆದು ಮಾತುಕತೆ ನಡೆಸುವ ಮೂಲಕ ಕುರ್ಚಿ ಕದನ ಗೊಂದಲಕ್ಕೆ ತೆರೆ ಎಳೆಯುವ ಸಾಧ್ಯತೆಗಳಿವೆ ಎಂದು ತಿಳಿಸಿದರು. ಇದರೊಂದಿಗೆ ಕುರ್ಚಿ ಕಾಳಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಪದತ್ಯಾಗನಾ? ಪಟ್ಟಾಭಿಷೇಕನಾ? ಎಂಬ ಕುತೂಹಲ ಮೂಡಿಸಿದೆ.