ತುಮಕೂರು, (ಜನವರಿ 16):ಮುಖ್ಯಮಂತ್ರಿ ಸಿದ್ದರಾಮಯ್ಯ (ಸಿದ್ದರಾಮಯ್ಯ) ತೆರಳಬೇಕಿದ್ದ ಹೆಲಿಕಾಪ್ಟರ್‌ನಲ್ಲಿ (ಹೆಲಿಕಾಪ್ಟರ್) ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ (ತುಮಕೂರು) ತೆರಳಬೇಕಿತು. ಆದರೆ, ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಇದರಿಂದ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿದರು.