ಮಂಗಳೂರು/ ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಂಖಂಡ ರಾಜೀವ್ ಗೌಡ (ರಾಜೀವ್ ಗೌಡ) ಬಂಧಿಸಲಾಗಿದೆ. ಇದರ ಜೊತೆಗೆ ಆರೋಪಿಗೆ ತನ್ನ ಫಾರ್ಮ್ ಹೌಸ್ ನಲ್ಲಿ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್ ಎಂಬವರನ್ನು ಸಹ ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಇನ್ನು ರಾಜೀವ್ ಗೌಡ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮಂಗಳೂರಿನ ಉದ್ಯಮಿ ಮೈಕಲ್ ಫಾರ್ಮ್ ಹೌಸ್ ನಲ್ಲಿ ಆಶ್ರಯ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಗದ್ರೆ, ಉದ್ಯಮಿ ಮೈಕಲ್ ಯಾರು? ಫಾರ್ಮ್ ಹೌಸ್ ಎಲ್ಲಿದೆ? ಹೇಗಿದೆ? ಹಾಗೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು ಹೇಗೆ? ಎನ್ನುವುದನ್ನು ವಿಡಿಯೋನಲ್ಲಿ ನೋಡಿ.