ಜಾರ್ಜಿಯಾ, ಫೆಬ್ರವರಿ 10: ಜಾರ್ಜಿಯಾದ ಗೈನೆಸ್ ವಿಲ್ಲೆಯಲ್ಲಿ ಜನದಟ್ಟಣೆಯ ರಸ್ತೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಇದರ ಪರಿಣಾಮ ವಿಮಾನವು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ವಿಡಿಯೋ ಆಗಿದೆ. ಒಂದೇ ಎಂಜಿನ್ ಹೊಂದಿರುವ ವಿಮಾನವು ಜನನಿಬಿಡ ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಮೂರು ವಾಹನಗಳಿಗೆ ಡಿಕ್ಕಿ ಹೊಡೆದಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಎಂಜಿನ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ತುರ್ತು ಭೂಸ್ಪರ್ಶ ಆದೇಶ. ವಿಮಾನವು ನಿಲ್ದಾಣಕ್ಕೆ ಹಿಂದಿರುಗಲು ಸಾಕಷ್ಟು ಶಕ್ತಿಯನ್ನು ಹೊಂದಿರಲಿಲ್ಲ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಫೆಡರಲ್ ವಿಮಾನಯಾನ ಆಡಳಿತ ಮತ್ತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ