Headlines

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ: ಸಂಚಲನ ಮೂಡಿಸಿದ ಸ್ನೇಹಮಯಿ ಕೃಷ್ಣ ಆರೋಪ

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ: ಸಂಚಲನ ಮೂಡಿಸಿದ ಸ್ನೇಹಮಯಿ ಕೃಷ್ಣ ಆರೋಪ


ಬೆಂಗಳೂರು, (ಫೆಬ್ರವರಿ 19): ಅಧಿಕಾರಿಯೊಬ್ಬರಿಗೆ ಭಡ್ತಿ ನೀಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ 1.60 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ₹9 ಕೋಟಿ ಅಕ್ರಮ ಹಣ ವರ್ಗಾವಣೆ ನಡೆದಿದ್ದು, ಹಣ ಸಾಗಿಸಿದ ಕಾರಿನ ಫೋಟೋ ಸಹಿತ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿಗೆ ಲಂಚ ಪಡೆದು ಭಡ್ತಿ ಎಂಬ ಗಂಭೀರ ಆರೋಪಗಳು ರಾಜ್ಯ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ. ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *