ಹಿಂದೂ ಭಾವನೆಗೆ ಧಕ್ಕೆ; ರಾಜಮೌಳಿ ವಿರದ್ಧ ದಾಖಲಾಯ್ತು ದೂರು

ಹಿಂದೂ ಭಾವನೆಗೆ ಧಕ್ಕೆ; ರಾಜಮೌಳಿ ವಿರದ್ಧ ದಾಖಲಾಯ್ತು ದೂರು


ಖ್ಯಾತ ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಅವರು ‘ವಾರಣಾಸಿ’ ಸಿನಿಮಾಗಳಲ್ಲಿ ಬ್ಯೂಸಿ ಇದ್ದಾರೆ. ಇತ್ತೀಚೆಗೆ ಸಿನಿಮಾದ ದೊಡ್ಡ ಈವೆಂಟ್ ಆಯೋಜನೆ ಮಾಡಲಾಗಿದೆ. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಈವೆಂಟ್ ನಡೆದಿತ್ತು. ಈ ವೇಳೆ ರಾಜಮೌಳಿ ಅವರು ಹಿಂದೂ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ದೂರು ದಾಖಲಾಗಿದೆ.

‘ವಾರಣಾಸಿ’ ಟೈಟಲ್ ಲಾಂಚ್ ಮಾಡಲು ಸಾಕಷ್ಟು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಸರಿಯಾದ ಸಮಯಕ್ಕೆ ಟೀಸರ್ ಪ್ರದರ್ಶನ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ರಾಜಮೌಳಿಗೆ ಬೇಸರ ಉಂಟಾಗಿದೆ. ಹೀಗಾಗಿ, ಹನುಮಾನ್ ದೇವರನ್ನು ರಾಜಮೌಳಿ ದೂಷಿಸಿದರು. ‘ಹನುಮಂತ ಒಳ್ಳೇದು ಮಾಡ್ತಾನೆ ಎಂದು ತಂದೆ ಹೇಳಿದ್ರು. ಆದರೆ, ಒಳ್ಳೇದು ಮಾಡೋದು ಅಂದ್ರೆ ಹೀಗೇನಾ’ ಎಂದು ರಾಜಮೌಳಿ ಪ್ರಶ್ನೆ ಮಾಡಿದ್ದರು.

ತಾಂತ್ರಿಕ ದೋಷ ಉಂಟಾಗಿದ್ದಕ್ಕೆ ಹನುಮಂತ ಕಾರಣ ಎಂದು ರಾಜಮೌಳಿ ಹೇಳಿದ್ದಾರೆ. ಇದರಿಂದ ಸಿಟ್ಟಾಗಿರೋ ರಾಷ್ಟ್ರೀಯ ವಾನರ ಸೇನಾ ಅವರು ಹೈದರಾಬಾದ್‌ನ ಸರೂರ್‌ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

‘ರಾಜಮೌಳಿ ಅವರ ಹೇಳಿಕೆ ಹಿಂದೂಗಳ ಭಾವನೆಗೆ ಸಾಕಷ್ಟು ಧಕ್ಕೆ ತಂದಿದೆ. ಸಿನಿಮಾ ರಂಗದಲ್ಲಿ ಹಿಂದೂ ದೇವರನ್ನು ಅಗೌರವಿಸುವ ಪ್ರವೃತ್ತಿ ಹೆಚ್ಚುತ್ತಲೇ ಇದೆ. ಹೀಗಾಗಿ, ಈ ದೂರು ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಬೇಕು ಮತ್ತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಈ ರೀತಿಯ ಘಟನೆ ನಡೆಯದಂತೆ ನೋಡಿಕೊಳ್ಳಬೇಕು’ ಎಂದು ದೂರುದಾರರು ಕೋರಿದ್ದಾರೆ. ಸರೂರ್ ನಗರ ಈ ಬಗ್ಗೆ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಕಾದು ನೋಡಬೇಕಾಗಿದೆ.

ಇದನ್ನೂ ಓದಿ: ‘ವಾರಣಾಸಿ’ ಚಿತ್ರಕ್ಕಾಗಿ ಹಾಲಿವುಡ್ ದೃಶ್ಯಗಳನ್ನು ಕಾಪಿ ಮಾಡಿದ್ರಾ ರಾಜಮೌಳಿ? ಶುರುವಾಗಿದೆ ಚರ್ಚೆ

27 ಕೋಟಿ ವ್ಯಯ

ಶನಿವಾರ ನಡೆದ ಈ ಈವೆಂಟ್‌ಗೆ ರಾಜಮೌಳಿ ಹಾಗೂ ತಂಡದವರು 27 ಕೋಟಿ ರೂಪಾಯಿ ವ್ಯಯಿಸಿದ್ದಾರೆ. ಅದ್ದೂರಿಯಾಗಿ ನೃತ್ಯ ಪಟ್ಟಿ. ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಿಂದ ಹೈದರಾಬಾದ್‌ಗೆ ಆಗಮಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *