Headlines

ಪರೀಕ್ಷೆಗೆ ಹೆದರಿ ವಸತಿ ಶಾಲೆಯ ಕಾಂಪೌಂಡ್​​ ಹಾರಿ 5 ಮಂದಿ SSLC ವಿದ್ಯಾರ್ಥಿಗಳು ಪರಾರಿ!

ಪರೀಕ್ಷೆಗೆ ಹೆದರಿ ವಸತಿ ಶಾಲೆಯ ಕಾಂಪೌಂಡ್​​ ಹಾರಿ 5 ಮಂದಿ SSLC ವಿದ್ಯಾರ್ಥಿಗಳು ಪರಾರಿ!


ಹಾವೇರಿ, ಫೆಬ್ರವರಿ 27: ರಾಜ್ಯದಲ್ಲಿ ಮಾರ್ಚ್ 18 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪ್ರಾರಂಭವಾಗಲಿದೆ, ಪೂರ್ವ ಸಿದ್ಧತಾ ಪರೀಕ್ಷೆ ಸೇರಿ ಅಂತಿಮ ತಯಾರಿ ನಡೆಯುತ್ತಿದೆ. ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ತೇರ್ಗಡೆ ಹೊಂದಬೇಕೆಂಬ ಉದ್ದೇಶದಿಂದ ಶಿಕ್ಷಕರಿಗೆ ಶಿಕ್ಷಣ ಅಧಿಕಾರಿಗಳು, ತಹಶೀಲ್ದಾರ್ ಅವರು ಕೆಲವೆಡೆ ಆದ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಕೆಲಸ ಮಾಡುತ್ತಿದ್ದಾರೆ. ಪರೀಕ್ಷೆಯ ಬಗ್ಗೆ ಮಕ್ಕಳು ಆತಂಕಕ್ಕೆ ಒಳಗಾಗಬಾರದು ಎಂದು ಹಲವು ಕಾರ್ಯಕ್ರಮಗಳನ್ನು ನಡೆಸಿ ಅವರಿಗೆ ಧೈರ್ಯ ತುಂಬುವ ಕೆಲಸ ಆಗುತ್ತಿದೆ. ಹೀಗಿದ್ದರೂ ಹತ್ತನೇ ತರಗತಿ ಪರೀಕ್ಷೆಗೆ ಹೆದರಿ ಅಲ್ಪ ಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ 5 ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಆತಂಕಕಾರಿ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ರಾಣೆಬೆನ್ನೂರು ತಾಲೂಕು ಸುಣಕಲಬಿದರಿ ವಸತಿ ಶಾಲೆಯ ವಿದ್ಯಾರ್ಥಿಗಳ ಪರೀಕ್ಷೆಗೆ ಅಂಜಿ ಹಾಸ್ಟೆಲ್ ನಿಂದ ನಾಪತ್ತೆ, ವಿದ್ಯಾರ್ಥಿಗಳ ಬಗ್ಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಮುಚ್ಚಿಟ್ಟಿರುವ ಆರೋಪ ಕೇಳಿಬಂದಿದೆ. ಮಕ್ಕಳು ಇದ್ದಾರೆ, ಶಾಲೆಯವರು ಸಿಕ್ಕಿದ್ದಾರೆ ಎಂದು ಹೇಳಿದರು, ಅವರು ಬೇರೆಡೆ ಇದ್ದಾರೆಂದು ಹಾರಿಕೆ ಉತ್ತರ ನೀಡುತ್ತಿರುವ ಬಗ್ಗೆ ದೂರಲಾಗಿದೆ. ರಾತ್ರಿ ವೇಳೆ ವಾಚ್‌ಮೆನ್ ಇಲ್ಲದಿರುವುದನ್ನು ಗಮನಿಸಿದ ವಿದ್ಯಾರ್ಥಿಗಳು, ಇಂದು ನಸುಕಿನ ಜಾವ ವಸತಿ ಶಾಲೆ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಶಾಲೆಯಲ್ಲಿ ಪೂರ್ವಸಿದ್ಧತಾ ಪರೀಕ್ಷೆಗಳು ನಡೆಯುತ್ತಿದ್ದ ಹಿನ್ನೆಲೆ ಇವುಗಳಿಗೆ ಹೆದರಿ ಅವರು ವಸತಿಶಾಲೆಯಿಂದ ನಾಪತ್ತೆಯಾಗಿದ್ದಾರೆ.

(ಮಾಹಿತಿ ಅಪ್‌ಡೇಟ್ ಆಗುತ್ತಿದೆ)



Source link

Leave a Reply

Your email address will not be published. Required fields are marked *