SSLC ವಿದ್ಯಾರ್ಥಿಗಳು ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ
ಬೆಂಗಳೂರು, ಜನವರಿ 09: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಿಡಗೇಡಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಲೀಕ್ ನಡೆಯಲಿದೆ ಎಂದು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಪೋಸ್ಟ್‌ಗಳು, ವೀಡಿಯೊಗಳು ಮತ್ತು ಬಯೋಗಳಲ್ಲಿ ಪ್ರಕಟಿಸಿ, ಹಣ ಕೇಳಿ ವಿದ್ಯಾರ್ಥಿಗಳನ್ನು ಯಾಮಾರಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.
ನೂರು ರೂ. ಕೊಟ್ಟರೆ ಸಿಗುತ್ತೆ ಪ್ರಶ್ನೆ ಪತ್ರಿಕೆ
10 ನೇ ತರಗತಿಯ ಮೊದಲನೇ ಪೂರ್ವ ಸಿದ್ಧತಾ ಪರೀಕ್ಷೆಗಳು ಪ್ರಾರಂಭವಾಗಿದ್ದು, ಮಾರ್ಚ್‌ನಿಂದ ಮುಖ್ಯ ಪರೀಕ್ಷೆಯು ಪ್ರಾರಂಭವಾಗಲಿದೆ. ಇದರ ನಡುವೆ ಕೆಲ ಕಿಡಗೇಡಿಗಳು ಎಸ್‌ಎಸ್‌ಎಲ್‌ಸಿ, ಪೂರ್ವಭಾವಿ ಪ್ರಶ್ನೆ ಪತ್ರಿಕೆ ಲೀಕ್ ಮಾಡತ್ತೇವೆಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. 100 ರೂಪಾಯಿ ಫೋನ್‌ಪೇ ಅಥವಾ ಆನ್‌ಲೈನ್ ಪಾವತಿ ಮಾಡಿದರೆ ಪ್ರಶ್ನೆ ಪತ್ರಿಕೆ ಕಳುಹಿಸುತ್ತೇವೆ ಎಂದು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಈ ರೀತಿ ಲೀಕ್ ಆಗುತ್ತಿರುವ ಪ್ರಶ್ಬೆ ಪತ್ರಿಕೆಗಳು ಸಂಪೂರ್ಣ ನಕಲಿ ನಕಲಿಸಿ, ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯದೊಂದಿಗೆ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ.
ಈ ರೀತಿಯ ವದಂತಿಗಳಿಂದ ವೈದ್ಯರು ಆತಂಕಕ್ಕೆ ಒಳಗಾಗಿದ್ದಾರೆ, ಶಿಕ್ಷಣ ಇಲಾಖೆ ಮೇಲೂ ಕಿಡಗೇಡಿಗಳು ಚಾಲೆಂಜ್ ಹಾಕಿದಂತೆ ವರ್ತಿಸುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಮಾತು ಕೇಳಿ ವಿದ್ಯಾರ್ಥಿಗಳು ಆತುರಕ್ಕೆ ಒಳಗಾಗಿ ಮೋಸ ಹೋಗಬಾರದು ಎಂದು ಶಿಕ್ಷಣ ತಜ್ಞರು ಎಚ್ಚರಿಸಿದ್ದಾರೆ.
ಇದನ್ನೂ ಓದಿ ಇಂದಿನಿಂದ ಶುರು SSLC ಪೂರ್ವ ಸಿದ್ಧತಾ ಪರೀಕ್ಷೆ; ಮೂರು ಹಂತದಲ್ಲಿ ಎಕ್ಸಾಮ್
ಕಿಡಗೇಡಿಗಳ ವಿರುದ್ಧ ದೂರು
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಖಾಸಗಿ ಶಿಕ್ಷಣ ಇಲಾಖೆ ಹಾಗೂ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ ಆಫ್ ಪ್ರೈಮರಿ ಅಂಡ್ ಸೆಕೆಂಡರಿ ಸ್ಕೂಲ್ಸ್ ಕರ್ನಾಟಕ ಸಂಘಟನೆಗಳು ಅಧಿಕಾರಿಗಳಿಗೆ ದೂರು ನೀಡಿದ್ದು, ಕಿಡಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳು ಯಾವುದೇ ಸುಳ್ಳು ಪ್ರಚಾರಕ್ಕೆ ಬಲಿಯಾಗದೆ ಅಧಿಕೃತ ಮಾಹಿತಿಯ ಮೇಲೆ ಮಾತ್ರ ನಂಬಿಕೆ ಇಡಬೇಕು ಎಂದು ಮನವಿ ಮಾಡಿದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.