ಬೆಂಗಳೂರು, ನವೆಂಬರ್ 21): ಮೊನ್ನೆ ಬೆಂಗಳೂರಿನ ಡೈರಿ ಸರ್ಕಲ್ ಫ್ಲೈ ಮೇಲೆ ನಡೆದಿದ್ದ ಏಳು ಕೋಟಿ ರೂ. ರಾಬರಿ ಬೆಂಗಳೂರು ಪೋಲೀಸ ತಲೆ ಕೆಡಿಸಿದೆ. ಹದಿನೆಂಟು ಜನ ಡಿಸಿಪಿಗಳ ನೇತೃತ್ವದ ತಂಡಗಳು ಎರಡು ದಿನ ಹಗಲು ರಾತ್ರಿ ನಿದ್ದೆ ಕೆಡಿಸಿಕೊಂಡು ದರೋಡೆಕೋರರ ಬಂಧನಕ್ಕೆ ಹುಡುಕಾಟ ನಡೆಸಿವೆ. ಆಂಧ್ರ, ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳ ಪೊಲೀಸರ ತಂಡ ಶೋಧ ಕಾರ್ಯ ನಡೆಸಿದೆ. ಆದರೂ ಇದುವರೆಗೂ ಆರೋಪಿಗಳಲ್ಲ. ಹೀಗಾಗಿ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಇಂದು(ನವೆಂಬರ್ 21) ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದು, ಪ್ರಕರಣದ ತನಿಖೆಯಲ್ಲಿ ಈವರೆಗೆ ಆದ ಬೆಳವಣಿಗೆ ಬಗ್ಗೆ ಚರ್ಚೆಯಾಗಿದೆ.
ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಕಚೇರಿಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅಜಯ್ ಹಿಲೋರಿ, ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ, ದಕ್ಷಿಣ ಡಿಸಿಪಿ ಜಗಲಾಸರ್, ಸಿಸಿಬಿ ಡಿಸಿಪಿ-1 ಶ್ರೀಹರಿಬಾಬು ಭಾಗವಹಿಸಿದ್ದು, ಪ್ರಕರಣದ ತನಿಖೆ ಸುದೀರ್ಘ ಚರ್ಚೆಯಾಗಿದೆ.
ಇನ್ನು ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರಿನಲ್ಲಿ 7 ಕೋಟಿ 11 ಲಕ್ಷ ದರೋಡೆ ಪ್ರಕರಣದ ತನಿಖೆಯ ಪ್ರಗತಿ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ, ದರೋಡೆ ಪ್ರಕರಣ ಸಂಬಂಧ ಈವರೆಗೆ ಸಾಕಷ್ಟು ಲೀಡ್ ಸಿಕ್ಕಿದೆ. ಆದರೆ ಆರೋಪಿಗಳ ಪತ್ತೆ ಆಗುತ್ತಿಲ್ಲ. ಎಲ್ಲಾ ಪೊಲೀಸರು ಅಲರ್ಟ್ ಆಗಿದ್ದಾರೆ. ಪ್ರಕರಣ ಬೇಗ ಇತ್ಯರ್ಥ ಆಗುತ್ತೆ. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವಿಶ್ವಾಸ.