ಹಿಂದೂಗಳ ಮನೆಯನ್ನೇ ಗುರಿಯಾಗಿಸಿ ಕಲ್ಲು ತೂರಾಟ ಮಾಡ್ತಾರೆ: ಬಿಜೆಪಿ ಯುವ ಮೋರ್ಚಾ ನಾಯಕ ಗಂಭೀರ ಆರೋಪ

ಹಿಂದೂಗಳ ಮನೆಯನ್ನೇ ಗುರಿಯಾಗಿಸಿ ಕಲ್ಲು ತೂರಾಟ ಮಾಡ್ತಾರೆ: ಬಿಜೆಪಿ ಯುವ ಮೋರ್ಚಾ ನಾಯಕ ಗಂಭೀರ ಆರೋಪ


ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಲಕ್ ಪಾರ್ಕ್ ರಸ್ತೆಯಲ್ಲಿರುವ ಸರ್ಕಾರಿ ಕ್ವಾಟರ್ಸ್‌ನಲ್ಲಿ ವಾಸವಿರುವ ಸುಧಾ ಎಂಬವರ ಮನೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಕಲ್ಲುತೂರಾಟ ನಡೆಯುತ್ತಿದೆ ಎಂದು ಬಿಜೆಪಿ ಯುವ ಮೋರ್ಚಾ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಸಂತೋಷ್ ಗಂಭೀರ ಆರೋಪ ಮಾಡಿದ್ದಾರೆ. ಮುಸ್ಲಿಂ ಯುವಕರಿಂದ ಈ ಕೃತ್ಯ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಕಲ್ಲುತೂರಾಟವನ್ನು ಪ್ರಶ್ನಿಸಲು ಮುಂದಾದ ಮಹಿಳೆಯರ ಮೇಲೆ ಹಲ್ಲೆ ನಡೆಸಿದಾಗ ಯುವಕ ಸಿಕ್ಕಿಬಿದ್ದಿದ್ದಾನೆ. ಸ್ಥಳೀಯರು ಈ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಿಜೆಪಿ ಹಾಗೂ ಬಜರಂಗದಳ ಕಾರ್ಯಕರ್ತರು ಈ ಘಟನೆಯನ್ನು ಖಂಡಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇವಲ ಹಿಂದೂಗಳ ಮನೆಗಳನ್ನೇ ಗುರಿಯಾಗಿಸಿ ಕಲ್ಲು ತೂರಾಟ ನಡೆಸುತ್ತಿರುವುದು ಯಾಕೆ, ಹಾಗೂ ಇಂತಹ ಕೃತ್ಯಗಳಿಗೆ ಯಾರು ಪ್ರಚೋದನೆ ನೀಡುತ್ತಿದ್ದಾರೆ ಎಂದು ಸಂತೋಷ್ ಪ್ರಶ್ನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿರುವ ಅಕ್ರಮ ಚಟುವಟಿಕೆಗಳ ನಡುವೆ ಘಟನೆಯ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ಸಂತೋಷ ಆರೋಪಿಸಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ದೊಡ್ಡ ಮಟ್ಟದ ಹೋರಾಟ ನಡೆಸಲು ಉದ್ದೇಶಿಸಲಾಗಿದೆ.

ವಿವರಗಳಿಗೆ ಓದಿ: ಚಿಕ್ಕಮಗಳೂರು: ಕಲ್ಲು ತೂರಾಟ ಮಾಡಿದವರ ಮೇಲೆ, ಕಿಡಿಗೇಡಿಗಳ ಹಿಡಿದವರ ಮೇಲೂ ಎಫ್ ಐಆರ್!

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *