Headlines

ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಮಕ್ಕಳು ಬಚಾವ್​​

ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಮಕ್ಕಳು ಬಚಾವ್​​


ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾಣಿ: ಶಿಕ್ಷಕಿಯ ಸಮಯ ಪುಸ್ತಕದಿಂದ ಮಕ್ಕಳು ಬಚಾವ್

ಮೈಸೂರು, ಮಾರ್ಚ್ 18: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಮೊದಲ ಮಳೆ ಸುರಿದಿದೆ. ಸುಮಾರು 1 ಗಂಟೆಗೂ ಹೆಚ್ಚು ಸಮಯ ವರುಣ ಅಬ್ಬರಿಸಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಮಂದಿಗೆ ತಂಪಿನ ಅನುಭವವಾಗಿದೆ. ಈ ನಡುವೆ ಭಾರೀ ಗಾಳಿ ಮಳೆಯ ವೇಳೆ ಹುಣಸೂರು ತಾಲೂಕಿನ ದಾಸನಪುರದಲ್ಲಿ ಭಾರಿ ಅನಾಹುತ ತಪ್ಪಿದೆ. ಮಕ್ಕಳು ತರಗತಿಯಲ್ಲಿ ನಡೆದದ್ದೇ ಗಾಳಿ ಮಳೆಗೆ ಶಾಲೆಯ ಮೇಲ್ಚಾವಣಿ ಹಾರಿ ಹೋಗಿದ್ದು, ಈ ವೇಳೆ ಶಾಲೆಯ ಮೆರೆದ ಶಿಕ್ಷಕಿ ಸುಮಾ ಎಲ್ಲ ವಿದ್ಯಾರ್ಥಿಗಳನ್ನು ಡೆಸ್ಕ್ ಕೆಳಗೆ ಕೂರಿಸಿದ್ದಾರೆ. ಹೀಗಾಗಿ ಸಂಭವನೀಯ ಅನಾಹುತ ತಪ್ಪಿದೆ. ಗಾಳಿಗೆ ಮೇಲ್ಛಾವಣಿ ಹಾರಿ ಹೋಗುವ ಬದಲು ಕುಸಿದಿದ್ದರೆ ದೊಡ್ಡ ಅನಾಹುತವೇ ನಡೆಯುವ ಸಾಧ್ಯತೆ ಇತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *