ಪ್ರಶ್ನೆಪತ್ರಿಕೆ ಲೀಕ್ ತಡೆಗೆ ಕಠಿಣ ಕ್ರಮ (ಸಾಂದರ್ಭಿಕ ಚಿತ್ರ)
ಬೆಂಗಳೂರು, ಜನವರಿ 17: ಪಿಯುಸಿ ಪರೀಕ್ಷೆ (ಪಿಯುಸಿ ಪರೀಕ್ಷೆ) ಸಮೀಪಿಸುತ್ತಿರುವ ಸಂದರ್ಭದಲ್ಲಿ ಕಿಡಗೇಡಿಗಳು ಭವಿಷ್ಯದ ವಿದ್ಯಾರ್ಥಿಗಳ ಜೊತೆ ಆಟವಾಡುತ್ತಿದ್ದಾರೆ. ರಾಜ್ಯ ಮಟ್ಟದಲ್ಲಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ (ಪ್ರಶ್ನೆ ಪತ್ರಿಕೆ ಸೋರಿಕೆ) ಮಾಡಿ ಮಕ್ಕಳಲ್ಲಿ ಪೋಷಕರಲ್ಲಿ ಆತಂಕ ತಂದಿದ್ದಾರೆ. ಕಳೆದ ವಾರ ನಡೆದ ರಾಜ್ಯಮಟ್ಟದ ಪೂರ್ವಭಾವಿ ಪರೀಕ್ಷೆಯಲ್ಲಿ ಜನವರಿ 6ರಂದು ನಡೆದ ಗಣಿತ ಪರೀಕ್ಷೆ ಪ್ರಶ್ನೆಪತ್ರಿಕೆ ಲೀಕ್ ಮಾಡಲಾಗಿತ್ತು. ಶಿವಮೊಗ್ಗ ಹಾಗೂ ಕಲಬುರಗಿಯಲ್ಲಿ ಪ್ರಶ್ನೆಪತ್ರಿಕೆ ವೈರಲ್ ಆಗಿದೆ. ಈ ಬಗ್ಗೆ ಟಿವಿ9 ಸುದ್ದಿ ಪ್ರಸಾರದ ಬಳಿಕ ಎಚ್ಚೆತ್ತುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಅಲರ್ಟ್ ಆಗಿದೆ. ಪ್ರಶ್ನೆಪತ್ರಿಕೆ ಲೀಕ್ ಮಾಡುವ ಉಪನ್ಯಾಸಕರು ಕೆಲಸ ಮಾಡುವ ಕಾಲೇಜುಗಳನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಲು ಮುಂದಾಗಿದ್ದಾರೆ. ಕಪ್ಪು ಪಟ್ಟಿಗೆ ಸೇರುವ ಜೊತೆಗೆ ಮಾನ್ಯತೆ ಹಾಗೂ ಅನುದಾನಕ್ಕೂ ಕತ್ತರಿ ಹಾಕಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
ಇನ್ಮುಂದೆ ಪ್ರಶ್ನೆ ಪತ್ರಿಕೆ ಲೀಕ್ ಆದರೆ ಯಾವ ಕಾಲೇಜಿನಿಂದ ಲೀಕ್ ಆಯಿತೋ ಆ ಕಾಲೇಜನ್ನು ಕಪ್ಪು ಪಟ್ಟಿಗೆ ಸೇರಿಸಲು ಹಾಗೂ ಮಾನ್ಯತೆ, ಅನುದಾನಕ್ಕೆ ಕತ್ತರಿ ಹಾಕುವ ಬಗ್ಗೆಯೂ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಸರ್ಕಾರಿ ಕಾಲೇಜುಗಳ ಅನುದಾನದ ಜೊತೆಗೆ ಕಪ್ಪುಪಟ್ಟಿಗೆ ಸೇರಿಸುವುದು ಹಾಗೂ ಅನುದಾನ ರಹಿತ ಕಾಲೇಜಾದರೆ ಯಾವುದೇ ಖಾಸಗಿ ಕಾಲೇಜಿನ ಮಾನ್ಯತೆ ರದ್ದುಗೊಳಿಸುವ ಬಗ್ಗೆ ಕ್ರಮಕ್ಕೆ ಮುಂದಾಗಿದೆ.
ಪ್ರಶ್ನೆಪತ್ರಿಕೆ ಲೀಕ್ ಮಾಡಿದ ಕಾಲೇಜಿನ ಪ್ರಾಂಶುಪಾಲರು ಹಾಗೂ ಶಾಮೀಲಾದ ಶಿಕ್ಷಕರ ಮೇಲೆ ಕಾನೂನು ಕ್ರಮಕ್ಕೆ ಹಾಗೂ ಶಿಸ್ತು ಕ್ರಮಕ್ಕೆ ಮುಂದಾಗಿದೆ.
ಇದನ್ನೂ ಓದಿ: ಒರಿಜಿನಲ್ ಅಂತ ನಕಲಿ 2ನೇ ಪಿಯು ಪ್ರಶ್ನೆಪತ್ರಿಕೆ ಹರಿಬಿಟ್ಟಿದ್ದ ಕಿಡಿಗೇಡಿಗಳು: ಯೂಟ್ಯೂಬ್ ಚಾನೆಲ್ ವಿರುದ್ಧ ದೂರು
ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಲೀಕ್ ಮಾಡಿ ವೈರಲ್ ಮಾಡುವ ಕಿಡಗೇಡಿಗಳ ವಿರುದ್ಧವೂ ಇಲಾಖೆ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದು, ಸಾಮಾಜಿಕ ಜಾಲತಣದಲ್ಲಿನ ಕಿಡಗೇಡಿಗಳ ಖಾತೆಗಳ ಮಾಹಿತಿ ನೀಡಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.