
ಬೆಂಗಳೂರು, (ಮಾರ್ಚ್ 06): ಚಿಕ್ಕ ಮಕ್ಕಳು (ಮಕ್ಕಳು) ಕಾಡುತ್ತಿರುವ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ (ಸಾಮಾಜಿಕ ಮಾಧ್ಯಮ) ವ್ಯಸನಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲೂ 16 ವರ್ಷದ ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಪ್ರಕಟಿಸಿದ್ದಾರೆ. ದಿನವಿಡೀ ಮೊಬೈಲ್ ಬಳಕೆಯನ್ನೇ ಮಗ್ನರಾಗಿರುತ್ತಿದ್ದ ಮಕ್ಕಳ ಭವಿಷ್ಯದ ಸರ್ಕಾರವು ಈ ಕಠಿಣ ನಿರ್ಧಾರವನ್ನು ಕೈಗೊಂಡಿದೆ, ರಾಜ್ಯ ಸರ್ಕಾರದ ಈ ನಡೆಗೆ ಮೆಚ್ಚಿಕೆಯಾಗಿದೆ. ಇನ್ನು ಈ ಬಗ್ಗೆ ವಿಚಾರಿಸಿದಾಗ ಸಾಮಾಜಿಕ ಜಾಲತಾಣ ಬ್ಯಾನ್ ಮಾಡಿರುವ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.