ಕೋಗಿಲು ಶೆಡ್ಡಲ್ಲಿದ್ದವರಿಗೆ ತ್ವರಿತ ಪರಿಹಾರ, ಅರ್ಹರ ಕಣ್ಣೀರು ಒರೆಸದ ಸರ್ಕಾರ
ಬೆಂಗಳೂರು, ಡಿಸೆಂಬರ್ 31: ಬೆಂಗಳೂರು (ಬೆಂಗಳೂರು) ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್, ಮನೆಗಳ ತೆರೆವು ದೊಡ್ಡ ಮಟ್ಟದಲ್ಲಿ ರಾಜಕೀಯ ಕೋಲಾಹಲವನ್ನೇ ಸೃಷ್ಟಿಸಿದೆ. ಎಲ್ಲಾ ಸಂತ್ರಸ್ತರಿಗೆ ಕೇವಲ ಎರಡೇ ದಿನದಲ್ಲಿ ಪರಿಹಾರ ಕೊಡಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಬೇರೆಬೇರೆ ಜಿಲ್ಲೆಗಳಲ್ಲಿ ವಸತಿರಹಿತ ಸಂತ್ರಸ್ತರಿದ್ದರೂ ಅವರಿಗೆ ಪರಿಹಾರ ಸಿಕ್ಕಿಲ್ಲ. ಕಾಂಗ್ರೆಸ್ (ಕಾಂಗ್ರೆಸ್) ಈ ಇಬ್ಬಗೆ ನೀತಿ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
65 ವರ್ಷ ಕಳೆದ್ರೂ ಶರಾವತಿ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ
ಶಿವಮೊಗ್ಗದಲ್ಲಿ 1959 ಲಿಂಗನಮಕ್ಕಿ ಡ್ಯಾಂ ನಿರ್ಮಾಣ ಆಗಿದ್ದು, ಸಾಗರ, ಹೊಸನಗರ ತಾಲ್ಲೂಕಿನಲ್ಲಿ 6000ಕ್ಕೂ ಅಧಿಕ ರೈತರು ಭೂಮಿ ಕಳೆದುಕೊಂಡಿದ್ದರು. ಇವರಿಗೆ 9,600 ಭೂಮಿ ಕೊಡುಗೆ. ಆದರೂ, 65 ವರ್ಷದಿಂದ ಹಕ್ಕುಪತ್ರ ಸಿಕ್ಕಿಲ್ಲ. ಇದೇ ಕಾಂಗ್ರೆಸ್ ನಾಯಕರು ಸಂತ್ರಸ್ತರ ಪರ ಪಾದಯಾತ್ರೆ ನಡೆಸಿದರು. ಆದರೆ ಪಕ್ಷ ಅಧಿಕಾರಕ್ಕೆ ಬಂದಮೇಲೆ ಮರೆತು ಬಿಟ್ಟಿದ್ದಾರೆ.
ಕೊಡಗು ಪ್ರವಾಹ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ
2019 ರಲ್ಲಿ ಕುಶಾಲನಗರ ತಾಲೂಕಿನ ಸಿದ್ದಾಪುರ, ಕರಡಿಗೋಡು, ನೆಲ್ಲಿಹುದಿಕೇರಿ, ಕುಂಬಾರಗುಂಡಿ ಗ್ರಾಮಗಳು ಪ್ರವಾಹಕ್ಕೆ ಸಿಲುಕಿದ್ದವು. ಅಂದು ಮನೆ ಕಳೆದುಕೊಂಡವರಿಗೆ ಪ್ಲಾಸ್ಟಿಕ್ ಹೊದಿಕೆಯೇ ಆಶ್ರಯವಾಗಿದೆ. ಸರ್ಕಾರ ಪರಿಹಾರ ಕೊಟ್ಟಿಲ್ಲ. ಪ್ರಯಾಯ ಮನೆಗೆ 7 ಶುದ್ಧ ಜಾಗ ಗುರುತು ಮಾಡಿದ್ದರೂ ಭರವಸೆಯಿಲ್ಲ.
ಬೆಳಗಾವಿಯಲ್ಲಿ 1095 ದಿನ ಕಳೆದರೂ ಸಿಕ್ಕಿಲ್ಲ ಸೂರು
ಬೆಳಗಾವಿಯ ಕಲ್ಯಾಣನಗರದಲ್ಲಿ ಮಳೆಯಿಂದ ಪ್ರೇಮಾ ಎಂಬುವವರ ಮನೆ ಬಿದ್ದಿತ್ತು. 1095 ದಿನ ಕಳೆದರೂ ಸೂರು ಸಿಕ್ಕಿಲ್ಲ. ಹೊಸ ಮನೆಗೆ ಪಾಯ ಹಾಕಿ ಪರಿಹಾರಕ್ಕಾಗಿ ಕುಟುಂಬ ಕಾಯುತ್ತಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರ ಕಣ್ಣೀರು ಒರೆಸದ ಸರ್ಕಾರ
ಬೆಂಗಳೂರು ಜನರಿಗೆ ಪರಿಹಾರ ಕೊಟ್ಟ ಸರ್ಕಾರದ ವಿರುದ್ಧ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರದ ಇಬ್ಬಗೆಯ ನೀತಿಗೆ ಕಿಡಿಕಾರಿದ್ದಾರೆ.
ಧಾರವಾಡ, ಬಳ್ಳಾರಿಯಲ್ಲಿ ಕೆಐಎಡಿಬಿಗೆ ಭೂಮಿ ಕೊಟ್ಟವರಿಗಿಲ್ಲ ನೆರವು
ಧಾರವಾಡ, ಬಳ್ಳಾರಿಯಲ್ಲಿ 15 ವರ್ಷಗಳ ಹಿಂದೆ ಕೆಐಎಡಿಬಿಗೆ ಭೂಮಿ ರೈತರು ನೀಡಿದ್ದರು. ಬಳ್ಳಾರಿಯಲ್ಲಿ 12 ಸಾವಿರ ಕೋಟಿ ಜಮೀನು ವಶಪಡಿಸಿಕೊಳ್ಳಲಾಗಿದೆ. ಧಾರವಾಡದ ರೈತರಿಗೆ ಪರಿಹಾರ ನೀಡುವಂತೆ ಆದೇಶ ನೀಡಿದ್ದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ.
ಚಿಕ್ಕಮಗಳೂರು: 11 ಕುಟುಂಬಗಳಿಗೆ ಇನ್ನೂ ಸಿಕ್ಕಿಲ್ಲ
ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಎರಡು ಗ್ರಾಮದಲ್ಲಿ 11 ಕುಟುಂಬಗಳಿಗೆ 7 ವರ್ಷಗಳಿಂದ ಆಶ್ರಯವಿಲ್ಲ. 7 ವರ್ಷಗಳ ಹಿಂದೆ ಮಳೆಯಿಂದ ಮನೆಗಳು ನೆಲಸಮವಾಗಿದ್ದು, ಮಲೆಮನೆ, ಮಧುಗುಂಡಿಯ 11 ಕುಟುಂಬಗಳು ಮನೆಗಾಗಿ ನೋಡುತ್ತಿವೆ.
ಮತ್ತೊಂದೆಡೆ, ಗದಗ ಸಿಂಗಟಾಲೂರ ಏತ ನೀರಾವರಿ ಯೋಜನೆಗೆ ಭೂಮಿ ಕಳೆದುಕೊಂಡವರಿಗೆ ನೆಲೆಯಿಲ್ಲ. ಇಷ್ಟೇ ಅಲ್ಲ, ಧಾರವಾಡದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್‌ಗೆ 21 ಜಮೀನು ನೀಡಿದ್ದ ಮಧು ಪ್ರಸಾದ್ ಎಂಬುವವರಿಗೆ ಪರಿಹಾರ ಸಿಕ್ಕಿಲ್ಲ.
ಇದನ್ನೂ ಓದಿ: ಕೋಗಿಲು ನಿರಾಶ್ರಿತರಿಗೆ ಫಟಾಫಟ್ ಪರಿಹಾರ! ಚಿಕ್ಕಮಗಳೂರು, ಮಡಿಕೇರಿ ಪ್ರವಾಹ ಸಂತ್ರಸ್ತರಿಗೆ ಮನೆ ಯಾವಾಗ?
ಕೋಗಿಲು ನಿವಾಸಿಗಳ ವಿಷಯದಲ್ಲಿ ಮಾತ್ರ ಸರ್ಕಾರ ತಕ್ಷಣ ಪರಿಹಾರ ನೀಡಲು ಮುಂದಾಗಿದೆ. ಇದು ರಾಜ್ಯದ ಜನರಿಗೆ ಒಂದು ನ್ಯಾಯ, ಪಕ್ಕದ ರಾಜ್ಯದಿಂದ ಅಕ್ರಮವಾಗಿ ಶೆಡ್ ನಿರ್ಮಿಸಿ ಬೀಡುಬಿಟ್ಟವರಿಗೆ ಮತ್ತೊಂದು ನ್ಯಾಯವಾ ಎಂಬ ಪ್ರಶ್ನೆ ಹುಟ್ಟುಹಾಕಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ