ಉಡುಪಿ, ಫೆಬ್ರವರಿ 02: ಕರಾವಳಿ ಉಡುಪಿ ಜಿಲ್ಲೆಯಲ್ಲಿ ತಲ್ವಾರ್ಗಳು ಜಳಪಿಸಿವೆ. ಕಾಂಗ್ರೆಸ್ ಯುವ ಮುಖಂಡನ ಮೇಲೆ ನಗರದ ಪಿಪಿಸಿ ಕ್ರಾಸ್ ಬಳಿ ದಾಳಿ ನಡೆಸಲಾಯಿತು, ಮಾತುಕತೆಗೆಂದು ಕರೆಸಿ ಅಟ್ಯಾಕ್ ಮಾಡಲಾಗಿತ್ತು. ಘಟನೆಯಲ್ಲಿ ಎನ್ಎಸ್ಯುಐ ಉಪಾಧ್ಯಕ್ಷ ಶರತ್ ಕುಂದರ್ ಗಂಭೀರ ಘಟನೆ, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಮಣಿಪಾಲ ಹೋಟೆಲ್ನಲ್ಲಿ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿರುವ ಮಾಹಿತಿ ಇದೆ.
ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿವಾರಿನಿಂದ ದಾಳಿ ನಡೆಸಿ ಕೊಲೆ ಯತ್ನ. ಜೊತೆಗೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಖಾಕಿ ಹುಡುಕಾಟ ನಡೆಸುತ್ತಿದೆ, ತನಿಖೆ ಮುಂದುವರಿದಿದೆ.
(ಮಾಹಿತಿ ಅಪ್ಡೇಟ್ ಆಗಲಿದೆ)