ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್​ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ

ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್​ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ


ಯುವಕ ಮಂಜುನಾಥ್ ಹಾಗೂ ತರೀಕೆರೆ ಪೊಲೀಸ್ ಠಾಣೆ

ಚಿಕ್ಕಮಗಳೂರು, ಜನವರಿ 1: ಇನ್ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು (ಚಿಕ್ಕಮಗಳೂರು) ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೆವ ಗ್ರಾಮದ ನಿವಾಸಿ, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ.

ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇ ಪದೇ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದೆ. ಯುವತಿಗೆ ವೇಣು ಎಂಬ ಯುವಕನೊಂದಿಗೆ ಮದುವೆ ನಿಶ್ಚಿತಾರ್ಥವಾಗಿದ್ದು, ‘ಎಂಗೇಜ್ಮೆಂಟ್ ಆಗಿದೆ, ಮೆಸೇಜ್ ಮಾಡಬೇಡ’ ಎಂದು ಯುವತಿ ಮಂಜುನಾಥ್‌ಗೆ ತಿಳಿಸಿದ್ದಳು. ಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ. ಇದನ್ನು ಯುವತಿ ತನ್ನನ್ನು ಮದುವೆಯಾಗಲಿರುವ ಯುವಕ ವೇಣುಗೆ ತಿಳಿಸಿದ್ದಾಳೆ.

ಈ ಹಿನ್ನೆಲೆ ಮಾತನಾಡಬೇಕು ಎಂದು ಮಂಜುನಾಥ್‌ನನ್ನು ಕರೆಸಿಕೊಂಡ ವೇಣು ಆತನ ಮೇಲೆ ಸ್ನೇಹಿತರಾದ ಕಿರಣ್, ಅಪ್ಪು ಮತ್ತು ಮಂಜು ಜೊತೆ ಜಗಳವಾಡಿದ್ದಾನೆ. ಗಲಾಟೆ ವೇಳೆ ಮಂಜುನಾಥ್‌ಗೆ ಚಾಕುವಿನಿಂದ ಇರಿದು ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರ ಕಾಯಿಲೆ ಮಂಜುನಾಥ್‌ನನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೋಲೀಸಪ್ಪ! ಚಿಕ್ಕಮಗಳೂರಿಗೆ ಹೊಸ ವರ್ಷಾಚರಣೆಗೆ ಬಂದು ರಂಪಾಟ

ಈ ತರೀಕೆರೆ ಪೊಲೀಸ್ ಠಾಣಾ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *