
ಬೆಂಗಳೂರು, ಏಪ್ರಿಲ್ 09: ‘ಎಂದೆಂದಿಗೂ ಬೆಂಗಳೂರು’ ಥೀಮ್ ಅಡಿಯಲ್ಲಿ 18 ಆವೃತ್ತಿಯ ಟಿಸಿಎಸ್ ವಿಶ್ವ 10 ಓಟವು ಏಪ್ರಿಲ್ 26 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಕಳೆದ ವರ್ಷ ರಸ್ತೆಗಳಲ್ಲಿ ಗುಂಡಿಗಳೇ ತುಂಬಿದ ಓಟಗಾರರು ಅನುಭವಿಸಿದ್ದರು. ಆದರೆ ಈ ಭಾರಿ ಹಾಗಾಗಬಾರದು. ಈ ರೇಸ್ ನಡೆಯುವ ಮಾರ್ಗದಲ್ಲಿನ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಿಎಂ, ಡಿಸಿಎಂ ಮತ್ತು ಜಿಬಿಎ ಆಯುಕ್ತರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಈ ರೇಸ್ ಬೆಂಗಳೂರಿನ ಹೆಮ್ಮೆ. ಭಾರತದಾದ್ಯಂತ ಓಟಗಾರರು ಭಾಗವಹಿಸುತ್ತಾರೆ. ಅವರಿಗೆ ನಿರಾಶೆಯಾಗಬಾರದು. ನಗರದ ಎಲ್ಲಾ ರಸ್ತೆಗಳನ್ನು ಸರಿಪಡಿಸುವುದು ನಿಮ್ಮಿಂದ ತುಂಬಾ ಕಷ್ಟ ನಮಗೆ ಗೊತ್ತು, ಇಲ್ಲದಿದ್ದರೆ 10 ಕಿ.ಮೀ ರಸ್ತೆಯನ್ನು ದುರಸ್ತಿ ಮಾಡುವಂತೆ ಮನವಿ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.