ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಆತಿಥೇಯ ಭಾರತ ತಂಡವು ನಮೀಬಿಯಾ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಬಿಗ್ ಶಾಕ್ ಎದುರಾಗಿದ್ದು ಮತ್ತೊಬ್ಬ ಆಟಗಾರ ಗಾಯಗೊಂಡಿದ್ದಾನೆ. ಹೀಗಾಗಿ ಇಂದಿನ ಪಂದ್ಯಕ್ಕೆ ಭಾರತ ತಂಡವು ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಯುಎಸ್‌ಎ ಎದುರು ಭರ್ಜರಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ, ಇಂದು ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿಂದು ನಮೀಬಿಯಾ ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಪಾಳಯದಲ್ಲಿ ಗಾಯದ ಭೀತಿ ಎದುರಾಗಿದ್ದು, ಇಂದಿನ ಪಂದ್ಯದಲ್ಲಿ ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

ಹೌದು, ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಈಗಾಗಲೇ ಹೊಟ್ಟೆನೋವಿನಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಇಂದಿನ ಪಂದ್ಯಕ್ಕೆ ಅವರಿಗೆ ರೆಸ್ಟ್ ನೀಡಲು ಟೀಮ್ ಮ್ಯಾನೇಜ್‌ಮೆಂಟ್ ನಿರ್ಧರಿಸಿದೆ ಎಂದು ವರದಿಯಾಗಿದೆ.

ಇನ್ನು ಅಭಿಷೇಕ್ ಶರ್ಮಾಗೆ ರೆಸ್ಟ್ ನೀಡುವುದರಿಂದಾಗಿ ಆರಂಭಿಕರಾಗಿ ಕೇರಳ ಮೂಲದ ಬ್ಯಾಟರ್ ಸಂಜು ಸ್ಯಾಮ್ಸನ್ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವುದು ಬಹುತೇಕ ಕನ್ಫರ್ಮ್ ಆಗಿದೆ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಸಂಜುಗೆ ಇದು ಕೊನೆಯ ಅವಕಾಶವಾಗುವ ಸಾಧ್ಯತೆಯಿದೆ.

ಇನ್ನೊಂದೆಡೆ ನಿನ್ನೆ ನೆಟ್ ಪ್ರಾಕ್ಟೀಸ್ ಮಾಡುವ ವೇಳೆ ಟೀಂ ಇಂಡಿಯಾ ಮತ್ತೋರ್ವ ಆರಂಭಿಕ ಬ್ಯಾಟರ್ ಇಶಾನ್ ಕಿಶನ್ ಕಾಲ್ಬೆರಳಿನ ಗಾಯಕ್ಕೆ ಒಳಗಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಎಸೆದ ಯಾರ್ಕರ್ ಚೆಂಡು ನೇರವಾಗಿ ಕಿಶನ್ ಕಾಲ್ಬೆರಳಿಗೆ ಅಪ್ಪಳಿಸಿದ್ದು, ಇಶಾನ್ ಕಿಶನ್ ಕೂಡಾ ಇಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ.

ಇಶಾನ್ ಕಿಶನ್ ಹೊರಬಿದ್ದರೇ, ಸ್ಪಿನ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಭಾರತ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಮೊದಲ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್, ಭಾರತ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿರಲಿಲ್ಲ.

ಇನ್ನು ಮೊದಲ ವಿಶ್ವಕಪ್ ಪಂದ್ಯಕ್ಕೆ ಅಲಭ್ಯರಾಗಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಸಂಪೂರ್ಣ ಫಿಟ್ ಆಗಿದ್ದು, ಇಂದು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ. ಹೀಗಾದಲ್ಲಿ ವೇಗಿ ಮೊಹಮ್ಮದ್ ಸಿರಾಜ್ ತಮ್ಮ ಸ್ಥಾನವನ್ನು ಬುಮ್ರಾಗೆ ಬಿಟ್ಟುಕೊಡಬೇಕಾಗಿ ಬರಲಿದೆ.

Source link
ನಮೀಬಿಯಾ ಎದುರಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಬರೋಬ್ಬರಿ 3 ಮೇಜರ್ ಚೇಂಜ್! ಅಭ್ಯಾಸದ ವೇಳೆ ಮತ್ತೊಬ್ಬ ಆಟಗಾರನಿಗೆ ಗಾಯ!