Headlines

ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ

ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ


ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆಯ ಝಲ್ ಎನಿಸೋ ದೃಶ್ಯ

ತೆಲಂಗಾಣ, ಮಾ.23: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಒಬ್ಬ ಬಾಲಕ ಓಡುತ್ತಾ ರಸ್ತೆ ದಾಟಲು ಯತ್ನಿಸುವಾಗ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು, ಅವನು ಸ್ಪಲ್ಪ ದೂಎಕ್ಕೆ ಹೋಗಿ ಬಿದ್ದಿರುವ ದೃಶ್ಯವಾಗಿದೆ. ಇನ್ನು ಈ ವಿಡಿಯೋವನ್ನು @KarnatakaPortfolio ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೆಲವು ಪ್ರಕಾರ, ಈ ಬಾಲಕ 11 ವರ್ಷದ ಅನಿರುದ್ಧ ಹೇಳಲಾಗುತ್ತಿದ್ದು, ಘಟನೆ ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆಯ ಪಾಲಾಡುಗು ಗ್ರಾಮದಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಇನ್ನು ಈ ಬಾಲಕನನ್ನು ಯಾವ ವ್ಯಕ್ತಿ ಮತ್ತು ಆತನ ಕುಟುಂಬದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಇನ್ನು ಬಾಲಕನ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಈ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಕೆಲವು ಬಾಲಕನ ನಿರ್ಲಕ್ಷ್ಯವನ್ನು ಹೊಣೆಮಾಡಿದರೆ, ಇನ್ನೂ ಕೆಲವರು ಕಾರು ಅತಿವೇಗ (ಸುಮಾರು 109 ಕಿಮೀ/ಗಂ)ವೇ ಪ್ರಮುಖ ಕಾರಣ ಎಂದು ವಾದಿಸುತ್ತಿದ್ದಾರೆ. ಈ ದುರ್ಘಟನೆ ರಸ್ತೆ ಸುರಕ್ಷತೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಮತ್ತೆ ನೆನಪಿಸುತ್ತದೆ. ಚಾಲಕರು ವೇಗವನ್ನು ನಿಯಂತ್ರಿಸಿಕೊಂಡು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ಪಾದಚಾರಿಗಳು, ವಿಶೇಷವಾಗಿ ಮಕ್ಕಳು, ರಸ್ತೆ ದಾಟುವಾಗ ಜಾಗ್ರತೆ ವಹಿಸುವುದು ಅತ್ಯಂತ ಅಗತ್ಯ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *