ಮಂಗಳೂರಿನಲ್ಲಿ ಮತ್ತೆ ಝಳಪಿಸಿದ ತಲ್ವಾರ್, ಯುವಕನ ಮೇಲೆ ದಾಳಿ: ಶಾಂತಿಭಂಗದ ಆತಂಕ

ಮಂಗಳೂರಿನಲ್ಲಿ ಮತ್ತೆ ಝಳಪಿಸಿದ ತಲ್ವಾರ್, ಯುವಕನ ಮೇಲೆ ದಾಳಿ: ಶಾಂತಿಭಂಗದ ಆತಂಕ


ಆರೋಪಿಯನ್ನು ಸ್ಥಳೀಯರು ಹಿಡಿಯುತ್ತಿದ್ದಾರೆ

ಮಂಗಳೂರು, ನವೆಂಬರ್ 25: ಮಂಗಳೂರಿನಲ್ಲಿ (ಮಂಗಳೂರು) ಆಗುವ ಸಣ್ಣ ಪುಟ್ಟ ಅಪರಾಧ ಕೃತ್ಯಗಳನ್ನು ಕೂಡ ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ. ಇದಕ್ಕೆ ಕಾರಣವೆಂದರೆ, ಇಲ್ಲಿ ನಡೆಯುವ ಘಟನೆಗಳಿಂದ ಶಾಂತಿ ಭಂಗ ಆಗುವ ಎಲ್ಲಾ ಸಾದ್ಯತೆಗಳು ಹೆಚ್ಚಾಗುತ್ತವೆ. ಕಳೆದ ಐದಾರು ತಿಂಗಳಿಂದ ಕರಾವಳಿ, ದಕ್ಷಿಣ ಕನ್ನಡ ಜಿಲ್ಲೆ (ದಕ್ಷಿಣ ಕನ್ನಡ) ಶಾಂತಿ ನೆಲೆಸಿತ್ತು. ಈ ನಡುವೆ ಮತ್ತೊಂದು ದಾಳಿ ಆತಂಕ ಉಂಟು ಮಾಡಿದೆ. ಸೋಮವಾರ ಸಂಜೆ ಮಂಗಳೂರು ಹೊರವಲಯದ ಬಜ್ಪೆ ಪೊಲೀಸ್ ಠಾಣೆಯ ಅಖಿಲೇಶ್ ಎಂಬ ಯುವಕನ ಮೇಲೆ ನಾಲ್ಕು ಜನರ ತಂಡವೊಂದು ತಲ್ವಾರ್ ನಿಂದ ದಾಳಿ ನಡೆದಿದೆ. ಬೈಕ್ ನಲ್ಲಿ ಬಂದ ತಂಡ ದಾಳಿ ಮಾಡಿದ್ದು ತಲ್ವಾರ್ ನಿಂದ ಮೋಣಕೈಗೆ ಗಾಯವಾಗಿದೆ. ಗಾಯಾಳು ಅಖಿಲೇಶ್ ಅವರಿಗೆ ಮೂಡಬಿದಿರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಒಬ್ಬ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಒಟ್ಟು ನಾಲ್ಕು ಜನ ದುಷ್ಕರ್ಮಿಗಳು ಘಟನೆ ಬಳಿಕ ಪರಾರಿಯಾಗಲು ಯತ್ನಿಸಿದ್ದಾರೆ. ಮೂವರು ಒಂದೇ ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ಮತ್ತೋರ್ವ ಆರೋಪಿ ಸಿನಾನ್ ಪರಾರಿಯಾಗಲು ಯತ್ನಿಸಿದ್ದಾನೆ. ಸಿಕ್ಕ ಸಿಕ್ಕ ವಾಹನಗಳನ್ನು ಬಲವಂತವಾಗಿ ಅಡ್ಡಹಾಕಿದ್ದಾನೆ. ಆದರೆ ಯಾರು ಕೂಡ ನಿಲ್ಲಿಸಿಲ್ಲ. ಈತನ ಪುಂಡಾಟದಿಂದ ಗಾಬರಿಯಾಗಿ ಬೈಕ್‌ನಿಂದ ಬಿದ್ದಿದ್ದಾನೆ. ಇನ್ನು ಸಿನಾನ್ನ ಸ್ಥಳೀಯರು ಹಿಡಿದು ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಗಳೂರು ತಲ್ವಾರ್ ದಾಳಿ ಬಗ್ಗೆ ಪೊಲೀಸರು ಹೇಳಿದ್ದೇನು?

ನಾಲ್ವರು ಒಂದೇ ಬೈಕ್‌ನಲ್ಲಿ ಚಾಕು ಹಿಡಿದು ಹೋಗುತ್ತಿದ್ದರು. ಅದನ್ನು ನೋಡಿದ ಅಖಿಲೇಶ್ ಅವರ ಫೋಟೊ ತೆಗೆಗಿದ್ದಾರೆ. ಆ ಕಾರಣ ಅವರು ಈತನ ಮೇಲೆ ದಾಳಿ ಮಾಡಿದ್ದಾರೆ. ಅಖಿಲೇಶ್‌ಗೆ ಸಣ್ಣಪುಟ್ಟ ಗಾಯವಾಗಿದೆ. ನಾಲ್ವರು ಬಾರ್ ನಿಂದ ಕುಡಿದು ಬರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ಕುಡಿದ ಮತ್ತಿನಲ್ಲಿ ಆಗಿರುವ ಗಲಾಟೆಯೇ ಅಥವಾ ಇನ್ನೇನಾದರೂ ಕಾರಣ ಇದೆಯೇ ಎಂಬ ಬಗ್ಗೆ ತನಿಖೆ ನಡೆಯಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಯುವಕನ ಮೇಲೆ ತಲ್ವಾರ್ನಿಂದ ದಾಳಿ: ವಿಡಿಯೋ ನೋಡಿ

ಬಜ್ಪೆ ಮತ್ತು ಮೂಡಬಿದಿರೆ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದ ಮೂವರು ಯಾರು ಎಂಬುದು ಕೂಡ ಗೊತ್ತಾಗಿದೆ. ಆರೋಪಿಗಳ ಬಂಧನದ ಬಳಿಕವೇ ಈ ಕೃತ್ಯಕ್ಕೆ ಕಾರಣ ಏನು ಎಂಬುದು ಗೊತ್ತಾಗಲಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *