ಕೊನೆಯ ಸಿನಿಮಾ: ಅಭಿಮಾನಿಗಳಿಗೆ ಭಾವುಕ ವಿದಾಯ ಹೇಳಿದ ವಿಜಯ್

ಕೊನೆಯ ಸಿನಿಮಾ: ಅಭಿಮಾನಿಗಳಿಗೆ ಭಾವುಕ ವಿದಾಯ ಹೇಳಿದ ವಿಜಯ್


ದಳಪತಿ ವಿಜಯ್ (ತಲಪತಿ ವಿಜಯ್) ನಟನೆಯ ‘ಜನ ನಾಯಕನ್’ ಸಿನಿಮಾದ ಪ್ರೀ ರಿಲೀಸ್ ನಿನ್ನೆ (ಡಿಸೆಂಬರ್ 27) ಮಲೇಷ್ಯಾದಲ್ಲಿ ಬಲು ಅದ್ಧೂರಿಯಾಗಿ ನಡೆದಿದೆ. ರಾಜಕೀಯ ಪಕ್ಷ ಸ್ಥಾಪಿಸಿರುವ ವಿಜಯ್ ಅವರು, ‘ಜನ ನಾಗನ್’ ತಮ್ಮ ಕೊನೆಯ ಸಿನಿಮಾ ಎಂದು ಘೋಷಿಸಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮವೂ ಸಹ ಒಂದು ರೀತಿ ವಿಜಯ್ ಅವರಿಗೆ ಚಿತ್ರರಂಗದಿಂದ ವಿದಾಯ ಕೊಡುವಂತೆಯೇ ಇತ್ತು. ತಮಿಳಿನ ಖ್ಯಾತ ಯುವ ನಿರ್ದೇಶಕರಾದ ಅಟ್ಲಿ, ಲೋಕೇಶ್ ಕನಕರಾಜ್ ಇನ್ನೂ ಕೆಲವು ಕಾರ್ಯಕ್ರಮದಲ್ಲಿ ಹಾಜರಿದ್ದು, ವಿಜಯ್ ಅವರನ್ನು ಕೊಂಡಾಡಿದರು. ಕೊನೆಯಲ್ಲಿ ವಿಜಯ್ ಸಹ ತುಸು ಭಾವುಕವಾಗಿಯೇ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ್ದಾರೆ.

‘ಜನ ನಾಯಕನ್ ನನ್ನ ಕೊನೆಯ ಸಿನಿಮಾ, ಇದನ್ನು ಹೇಳುವುದೇ ನನಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೆ ಬೇರೆ ಆಯ್ಕೆ ಇಲ್ಲ’ ವಿಜಯ್. ‘ಅಭಿಮಾನಿಗಳು ಕೇಳುತ್ತಿದ್ದಾರೆ, ನೀವೇಕೆ ಸಿನಿಮಾ ಬಿಟ್ಟು ಹೋಗುತ್ತೀನಿ, ನಾನು ಬೀಚ್ ಬದಿ ಸಣ್ಣ ಮನೆ ಕಟ್ಟಿಕೊಳ್ಳೋಣ ಎಂದುಕೊಂಡೆ, ಆದರೆ ಅಭಿಮಾನಿಗಳು ದೊಡ್ಡ ಕೋಟೆಯನ್ನೇ ಕಟ್ಟಿಕೊಟ್ಟಿದ್ದಾರೆ. ನಾನು ನಟನೆಗೆ ಬಂದಾಗಿನಿಂದ ಈಗಿನವರೆಗೂ ಅಭಿಮಾನಿಗಳು ನನ್ನ ಜೊತೆಗೆ ಇದ್ದೀರಿ, ನನಗೆ ಬೆಂಬಲಿಸಿದ್ದೀರಿ, ನನಗೆ ಬೇಕಾದುದನ್ನು ನೀಡಿದ್ದೇನೆ, ಆದರೆ ಮುಂದಿನ ನನ್ನ ಜೀವನದ 30 ವರ್ಷಗಳನ್ನು ನಾನು ಅಭಿಮಾನಿಗಳಿಗಾಗಿ ಕಳೆಯಬೇಕು ಎಂದುಕೊಂಡಿದ್ದೀನಿ’ ಎಂದು ವಿಜಯ್ ಹೇಳಿದರು.

‘ನನಗಾಗಿ ತಮ್ಮ ಎಲ್ಲವನ್ನೂ ಕೊಟ್ಟಿರುವ ಅಭಿಮಾನಿಗಳಿಗಾಗಿ ನಾನು ನನ್ನ ಪ್ರೀತಿಯ ಸಿನಿಮಾವನ್ನು ಬಿಟ್ಟುಕೊಡುತ್ತಿದ್ದೀನಿ. ಈ ವಿಜಯ್ ಕೇವಲ ಒಳ್ಳೆಯದು ಹೇಳಲು ಬಂದವನಲ್ಲ. ಒಳ್ಳೆಯತನವನ್ನು ಸ್ಥಾಪಿಸಲು ಬಂದವ. ಇದು ನನ್ನ ಕೊನೆಯ ಸಿನಿಮಾ ಆಗಿರಬಹುದು, ಆದರೆ ಇದರ ಅಂತ್ಯದ ನಂತರ ಹೊಸ ಅಧ್ಯಾಯವೇ ಆರಂಭ ಆಗಲಿದೆ’ ಎಂದು ದಳಪತಿ ವಿಜಯ್.

ಇದನ್ನೂ ಓದಿ:’ಜನ ನಾಯಕನ್ ಬಳಿಕ ಸಿನಿಮಾ ಮಾಡ್ತೀರಾ?’; ಉತ್ತರಿಸಿದ ದಳಪತಿ ವಿಜಯ್

‘ಜನ ನಾಯಕನ್’ ಸಿನಿಮಾ ತಂಡದ ಬಗ್ಗೆ ಮಾತನಾಡಿರುವ ವಿಜಯ್, ‘ಅನಿರುದ್ಧ್ ರವಿಚಂದ್ರನ್ ‘ಮ್ಯೂಸಿಕ್ ಡಿಪಾರ್ಟ್ಮೆಂಟ್ ಸ್ಟೋರ್’ ಅವರು ಎಂದಿಗೂ ನಿರಾಶೆ ಮಾಡಿಲ್ಲ. ಇನ್ನು ನಿರ್ದೇಶಕ ಎಚ್ ವಿನೋದ್, ಕಮರ್ಷಿಯಲ್ ಸಿನಿಮಾದಲ್ಲಿಯೂ ಸಂದೇಶ ಇದೆ’ ಎಂದು. ಸಿನಿಮಾದ ನಾಯಕಿ ಪೂಜಾ ಬಗ್ಗೆ ಮಾತನಾಡಿ, ‘ಪೂಜಾ ತಮಿಳು ಚಿತ್ರರಂಗದ ಮೋನಿಕಾ ಬೆಳ್ಳುಚಿ, ಅವರ ನಟನೆ, ಡ್ಯಾನ್ಸು, ಅಂದಕ್ಕೆ ಸರಿಸಾಟಿ ಇಲ್ಲ’. ಇತರ ನಟಿ ಮಮಿತಾ ಬಗ್ಗೆ ಮಾತನಾಡಿ, ‘ಮಮಿತಾ ಡ್ಯೂಡ್ ಮೂಲಕ ಯುವಕರನ್ನು ಚಿತ್ರಮಂದಿರಕ್ಕೆ ಸೆಳೆದಿದ್ದರು, ಈಗ ಈ ಸಿನಿಮಾ ಮೂಲಕ ಕುಟುಂಬವನ್ನು ಸೆಳೆಯಲಿದ್ದಾರೆ. ಇನ್ನು ಪ್ರಕಾಶ್ ರೈ ಹಾಗೂ ನನ್ನ ಕಾಂಬಿನೇಷನ್ ಕೂಡ ಚೆನ್ನಾಗಿದೆ. ಒಳ್ಳೆಯ ಗೆಳೆಯರಿಗೆ ಒಳ್ಳೆಯ ಎದುರಾಳಿಗಳು ಬಹಳ’.

ಮಲೇಷ್ಯಾ ಬಗ್ಗೆಯೂ ಮಾತನಾಡಿದ ವಿಜಯ್, ‘ಮಲೇಷ್ಯಾ, ತಮಿಳು ಚಿತ್ರರಂಗದ ಪಾಲಿಗೆ ಬಹಳ ಮುಖ್ಯವಾದ ಮಾರುಕಟ್ಟೆಯಾಗಿದೆ. ಮಲೇಷ್ಯಾ ಎಂದೊಡನೆ, ನನ್ನ ಗೆಳೆಯ ಅಜಿತ್ ನಟಿಸಿರುವ ‘ಬಿಲ್ಲಾ’, ಸೇರಿದಂತೆ ಇನ್ನೂ ಕೆಲವು ಸಿನಿಮಾಗಳು ನೆನಪಾಗುತ್ತವೆ. ನನ್ನ ಕೊನೆಯ ಸಿನಿಮಾದ ಕಾರ್ಯಕ್ರಮ ಇಲ್ಲಿ ನಡೆಯುತ್ತಿರುವುದು ನನ್ನ ಪಾಲಿಗೆ ವಿಶೇಷವಾದುದು’.

‘ಶೀಘ್ರವೇ ಅಭಿಮಾನಿಗಳ ಮುಂದೆ ಸಿನಿಮಾ ಬರಲಿದೆ. ಈ ಬಾರಿ ಒಂಟಿಯಾಗಿ ಬರಲಿದ್ದೀವಾ? ಜಂಟಿಯಾಗಿ ಬರಲಿದ್ದೇವ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಆ ಕುತೂಹಲ ಇರಲಿ ಎಂದಿರುವ ವಿಜಯ್, ಇಷ್ಟು ವರ್ಷ ಒಂಟಿಯಾಗಿಯೇ ಹೋರಾಡಿದ್ದೇವೆ’ ಎಂದೂ ಸಹ ಹೇಳಿದ್ದಾರೆ. ‘ಜನ ನಾಯಕನ್’ ಸಿನಿಮಾ ಜನವರಿ 09 ರಂದು ಬಿಡುಗಡೆಯಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *