16

Image Credit : darshan thoogudeepa instagram
ಸಿನಿಮಾ ರಿಲೀಸ್‌ಗೆ ಕೆಲವೇ ಗಂಟೆ ಬಾಕಿ
ನಟ ದರ್ಶನ್ ತೂಗುದೀಪ ಅಭಿನಯದ ‘ದಿ ಡೆವಿಲ್’ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ದರ್ಶನ್ ಅನುಪಸ್ಥಿತಿಯಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಈಗ ಜೈಲಿನಲ್ಲಿದ್ದುಕೊಂಡೇ ದರ್ಶನ್ ಅವರು ಅಭಿಮಾನಿಗಳಿಗೆ ಸಂದೇಶ ಕಳಿಸಿದ್ದಾರೆ.
26
Image Credit : X
ಯಾರು ಏನು ಹೇಳಿದರೂ ಚಿಂತಿಸಬೇಡಿ
ದರ್ಶನ್ ಅವರು “ನನ್ನ ಹೃದಯದಿಂದ ಈ ಸಂದೇಶ ನಿಮಗೆ, ವಿಜಯಲಕ್ಷ್ಮೀ ನಿಮ್ಮೆಲ್ಲರಿಗೂ ತಲುಪಿಸುತ್ತಾಳೆ. ನಿಮ್ಮೆಲ್ಲರ ಪ್ರೀತಿ, ಕಾಳಜಿ, ಬೆಂಬಲ, ನನ್ನ ಸಿನಿಮಾ ಪ್ರಚಾರ ಬಗ್ಗೆ ಪ್ರತಿ ಬಾರಿಯೂ ವಿಜಯಲಕ್ಷ್ಮೀ ನನಗೆ ತಿಳಿಸುತ್ತಿದ್ದಾರೆ. ದೂರ ಇದ್ರು..ಪ್ರತಿ ಕ್ಷಣವೂ ನಿಮ್ಮ ಉಪಸ್ಥಿತಿಯನ್ನು ನಾನು ಅನುಭವಿಸುತ್ತೇನೆ. ನಾನು ನಿಮಗೆ ಹೇಳಲು ಬಯಸುವುದೇನೆಂದರೆ ದಯವಿಟ್ಟು ಯಾರು ಏನು ಹೇಳಿದರೂ ಚಿಂತಿಸಬೇಡಿ” ಎಂದು ಹೇಳಿದ್ದಾರೆ.
36
Image Credit : Instagram
ನನ್ನ ದೊಡ್ಡ ಶಕ್ತಿ ನೀವೇ
ಯಾವುದೇ ವದಂತಿ, ನೆಗೆಟಿವಿಟಿ ನಿಮ್ಮ ಹೃದಯವನ್ನು ಅಲುಗಾಡಿಸಲು ಬಿಡಬೇಡಿ. ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ, ಇಂದು ಎಂದಿಗಿಂತಲೂ ಹೆಚ್ಚಾಗಿ, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ. ನನ್ನ ಜೀವನದ ಈ ಹಂತದಲ್ಲಿ, ನನ್ನ ದೊಡ್ಡ ಶಕ್ತಿ ನೀವೇ ಎಂದಿದ್ದಾರೆ.
46
Image Credit : Instagram
ಡೆವಿಲ್ ಸಿನಿಮಾ ಕಡೆಗೆ ಗಮನ ಹರಿಸಬೇಕು
ಈ ಸಮಯದಲ್ಲಿ ನಮ್ಮ ಡೆವಿಲ್ ಸಿನಿಮಾ ಕಡೆಗೆ ಗಮನ ಹರಿಸಬೇಕು ಎಂದು ನಾನು ಬಯಸುತ್ತಿದ್ದೇನೆ. ನನಗೆ ತೋರಿಸಿದ ಅದೇ ಪ್ರೀತಿಯಿಂದ ನೀವು ಡೇವಿಲ್ ಸಿನಿಮಾ ಮೇಲೆ ತೋರಿಸಿ. ನನ್ನ ಅನುಪಸ್ಥಿತಿಯಲ್ಲಿಯೂ ಸಹ, ನೀವು ಪ್ರತಿಯೊಂದು ಪ್ರಶ್ನೆಗೆ, ಅನುಮಾನಕ್ಕೆ, ಧ್ವನಿಗೆ ಉತ್ತರಿಸಬೇಕೆಂದು ನಾನು ಬಯಸುತ್ತೇನೆ. ಪದಗಳಿಂದಲ್ಲ, ಆದರೆ ಈ ಚಿತ್ರದ ಅದ್ಭುತ ಯಶಸ್ಸಿನೊಂದಿಗೆ.
56
Image Credit : Asianet News
ನನ್ನ ಸುತ್ತಲೂ ಗೋಡೆಯಂತೆ ನಿಂತಿದ್ದೀರಾ
ನನ್ನ ಸಿನಿಮಾಗೆ ನೀವು ಮಾಡ್ತಿರೋ ಪ್ರಚಾರ.. ಎಫರ್ಟ್.. ನಿಮ್ಮ ಏಕತೆ… ಬಗ್ಗೆ ಕೇಳಿದಾಗ ನನಗೆ ಹೆಮ್ಮೆ ಮತ್ತು ಭಾವುಕನಗುತ್ತೇನೆ. ನಿಮ್ಮನ್ನೆಲ್ಲ ಮತ್ತೆ ಭೇಟಿಯಾಗುವ ದಿನಕ್ಕಾಗಿ ಕಾಯುತ್ತಿರೋದೇ ಖುಷಿ ಕೊಡ್ತಿದೆ. ನನ್ನ ಸುತ್ತಲೂ ಗೋಡೆಯಂತೆ ನಿಂತಿದ್ದಕ್ಕಾಗಿ ಧನ್ಯವಾದಗಳು. ನೀವು ನನ್ನನ್ನು ಎಷ್ಟು ನಂಬುತ್ತಿರೋ ನಾನು ನನ್ನ ಸೆಲೆಬ್ರಿಟಿಗಳನ್ನ ಅಷ್ಟೇ ನಂಬುತ್ತಿನಿ
66
Image Credit : FB
ಕಾಲವೇ ಸತ್ಯ ಹೇಳುತ್ತದೆ
ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಎಲ್ಲವನ್ನೂ ಉತ್ತರಿಸುತ್ತದೆ. ಅಲ್ಲಿವರೆಗೂ ತಲೆಯನ್ನೆತ್ತಿ, ಹೃದಯ ಬಲವಾಗಿರಲಿ, ಪ್ರೀತಿ ಅಚಲವಾಗಿರಲಿ. ನಿಮ್ಮ ದಾಸ ದರ್ಶನ ಎಂದು ಹೇಳಿರೋದನ್ನು ವಿಜಯಲಕ್ಷ್ಮೀ ಅವರು ಹಂಚಿಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.