Headlines

‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ಮೊದಲ ದಿನ 75 ಲಕ್ಷ, ನಂತರ ಎರಡು ದಿನ ಮ್ಯಾಜಿಕ್

‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ಮೊದಲ ದಿನ 75 ಲಕ್ಷ, ನಂತರ ಎರಡು ದಿನ ಮ್ಯಾಜಿಕ್


‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಈಗ ‘ದಿ ಕೇರಳ ಸ್ಟೋರಿ 2’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ಕೂಡ ಸಾಕಷ್ಟು ವಿವಾದಗಳನ್ನು ಸೃಷ್ಟಿಸಿದೆ. ಈ ರಿಲೀಸ್‌ಗೆ ಕೋರ್ಟ್ ತಡೆನೀಡಿತ್ತು. ಆ ಬಳಿಕ ತೆರವನ್ನು ತೆಗೆಯಲಾಯಿತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 75 ಲಕ್ಷ ರೂಪಾಯಿ ಮಾತ್ರ. ಆದರೆ, ಶನಿವಾರ ಹಾಗೂ ಭಾನುವಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ.

‘ದಿ ಕೇರಳ ಸ್ಟೋರಿ 2’ ಚಿತ್ರದಲ್ಲಿ ಉಲ್ಕಾ ಗುಪ್ತಾ, ಅದಿತಿ ಭಾಟಿಯಾ, ಐಶ್ವರ್ಯಾ ಓಝಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಕಾಮಾಖ್ಯ ನಾರಾಯಣ ಸಿಂಗ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ರಿಲೀಸ್‌ಗೆ ಕೇರಳ ಹೈಕೋರ್ಟ್ ತಡೆ ನೀಡಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಮರು ವಿಚಾರಣೆ ನಡೆಸಿ, ಚಿತ್ರದ ಬಿಡುಗಡೆಗೆ ಅನುಮತಿ ನೀಡಿತ್ತು. ಶುಕ್ರವಾರ ಸಿನಿಮಾ ತೆರೆಗೆ ಬಂದಿದೆ.

ಮೊದಲ ದಿನ ಈ ಚಿತ್ರ 75 ಲಕ್ಷ ರೂಪಾಯಿಗಳಿಗೆ ಬಂದಿದೆ. ಶನಿವಾರ ಹಾಗೂ ಭಾನುವಾರ ಅನುಕ್ರಮವಾಗಿ 4.65 ಕೋಟಿ ರೂಪಾಯಿ ಹಾಗೂ 5 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರದ ಕಲೆಕ್ಷನ್ ಅಲ್ಲಿ ಏರಿಕೆ ಕಂಡಿದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಲವ್ ಜಿಹಾದ್ ಕುರಿತ ಕಥೆಯನ್ನು ಹೇಳಲಾಗುತ್ತಿದೆ. ಈ ಕಾರಣದಿಂದ ಸಿನಿಮಾ ವಿವಾದ ಸೃಷ್ಟಿಸಿದೆ.

ಇದನ್ನೂ ಓದಿ: ವಿವಾದದ ನಡುವೆ ‘ದಿ ಕೇರಳ ಸ್ಟೋರಿ 2’ ರಿಲೀಸ್; ಹೀನಾಯ ಕಲೆಕ್ಷನ್

ಈ ಮೊದಲು ರಿಲೀಸ್ ಆಗಿದ್ದ ‘ದಿ ಕೇರಳ ಸ್ಟೋರಿ’ಯಲ್ಲಿ, ಹಿಂದೂ ಯುವತಿಯರನ್ನು ಯಾವ ರೀತಿಯಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರಿಸಿ, ಅವರನ್ನು ಐಸಿಸ್‌ಗೆ ಸೇರಿಸಲಾಯಿತು ಎಂದು ತೋರಿಸಲಾಗಿದೆ. ಈ ಚಿತ್ರಕ್ಕೆ ಪಶ್ಚಿಮ ವಲಯ ಸೇರಿದಂತೆ ಕೆಲವು ರಾಜ್ಯಗಳು ಬ್ಯಾನ್ ಹೇರುವ ಪ್ರಯತ್ನ ವಿಫಲವಾಗಿದೆ. ಈಗ ವಿಪುಲ್ ಅಮೃತ್ ಲಾಲ್ ಶಾ ನಿರ್ಮಾಣದ ಸಿನಿಮಾ ವಿವಾದ ಸೃಷ್ಟಿಸುತ್ತಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಎಷ್ಟಾಗುತ್ತೆ ಎಂದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *