‘ದಿ ಕೇರಳ ಸ್ಟೋರಿ 2’ (ಕೇರಳ ಕಥೆ 2) ಸಿನಿಮಾಗೆ ಸಂಬಂಧಿಸಿದ ವಿವಾದ ಹೆಚ್ಚಾಗುತ್ತಲೇ ಇದೆ. ಈ ಸಿನಿಮಾದಲ್ಲಿ ಕೋಮುವಾದದ ಅಂಶಗಳು ಇವೆ ಎಂಬ ಕಾರಣದಿಂದ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೇರಳದಲ್ಲಿ ಈ ಚಿತ್ರಕ್ಕೆ ವಿರೋಧವಾಗಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಸಿನಿಮಾ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅದರ ಬೆನ್ನಲ್ಲೇ ಸಿನಿಮಾದ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್‌ಗೆ (ಕೇರಳ ಹೈಕೋರ್ಟ್) ಅರ್ಜಿ ಸಲ್ಲಿಸಲಾಗಿದೆ. ಇದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ.
ಕಣ್ಣೂರಿನ ಶ್ರೀದೇವ್ ಎಂಬವರು ‘ದಿ ಕೇರಳ ಸ್ಟೋರಿ 2’ ಸಿನಿಮಾ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸಿನಿಮಾದಲ್ಲಿ ಕೋಮು ಗಲಭೆಗೆ ಕಾರಣ ಆಗುವ ಅಂಶಗಳು ಇವೆ. ಕಾನೂನು ಸುವ್ಯವಸ್ಥೆಗೆ ತೊಂದರೆ ಆಗಬಹುದು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಈ ಸಿನಿಮಾಗೆ ಪ್ರಮಾಣಪತ್ರ ನೀಡಿರುವ ಸೆನ್ಸಾರ್ ಮಂಡಳಿಯ ನಿರ್ಧಾರವನ್ನು ಕೂಡ ಪ್ರಶ್ನಿಸಲಾಗಿದೆ.
ಕೇರಳದಲ್ಲಿ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಮತಾಂತರ ಮಾಡಲಾಗುತ್ತಿದೆ ಹಾಗೂ ಅವರಿಗೆ ಹಿಂಸೆ ನೀಡಲಾಗುತ್ತಿದೆ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್‌ನಲ್ಲಿ ತೋರಿಸಲಾಗಿದೆ. ಆದರೆ ಇದನ್ನು ಅನೇಕರು ವಿರೋಧಿಸಿದ್ದಾರೆ. ಅರ್ಜಿ ಸ್ವೀಕರಿಸಿರುವ ನ್ಯಾಯಾಲಯವು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದೆ.
ಈ ಕುರಿತಂತೆ ಫೆಬ್ರವರಿ 24 ರಂದು ವಿಚಾರಣೆ. ಆದರೆ ಫೆಬ್ರವರಿ 27ಕ್ಕೆ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದೆ. ಒಂದು ವೇಳೆ ಫೆ.24ರಂದು ವಿಚಾರಣೆಯಲ್ಲಿ ಚಿತ್ರತಂಡಕ್ಕೆ ಹಿನ್ನಡೆ ಆದರೆ ರಿಲೀಸ್ ಗೆ ತೊಂದರೆ ಆಗಲಿದೆ. ಸದ್ಯ ಶುರು ಆಗಿರುವ ವಿವಾದದ ಬಗ್ಗೆ ಚಿತ್ರತಂಡದವರು ಯಾವ ರೀತಿ ಪ್ರತಿಕ್ರಿಯೆ ಇಲ್ಲ ಎಂದು ನೋಡಬೇಕಿದೆ.
ಇದನ್ನೂ ಓದಿ: ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್
ಕಾಮಾಕ್ಯ ನಾರಾಯಣ್ ಸಿಂಗ್ ಅವರು ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್ಲಾಲ್ ಶಾ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅದಿತಿ ಭಾಟಿಯಾ, ಐಶ್ವರ್ಯಾ ಊಜಾ, ಉಲ್ಕಾ ಗುಪ್ತಾ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. 2023ರಲ್ಲಿ ತೆರೆಗೆ ಬಂದಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾದ ಸೀಕ್ವೆಲ್ ಆಗಿ ಈ ಚಿತ್ರ ಸಿದ್ಧವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.