
ಭಾರಿ ವಿವಾದದ ಮೂಲಕ ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ 2’ (ಕೇರಳ ಕಥೆ 2) ಸಿನಿಮಾ ದೊಡ್ಡ ಕಲೆಕ್ಷನ್ ಮಾಡುವ ನಿರೀಕ್ಷೆ ಇತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಆಗಿಲ್ಲ. ಫೆಬ್ರವರಿ 27 ರಂದು ಬಿಡುಗಡೆ ಆದ ಈ ಸಿನಿಮಾಗೆ ಹೇಳಿಕೊಳ್ಳುವಂತಹ ಓಪನಿಂಗ್ ಸಿಗಲಿಲ್ಲ. ಬಿಡುಗಡೆ 9 ದಿನಗಳು ಕಳೆದಿವೆ. ಮಾಡಿದ ವಿವಾದಕ್ಕೆ ಈವರೆಗೂ ಆಗಿರುವ ಕಲೆಕ್ಷನ್ ಕಡಿಮೆ. 9 ದಿನಗಳಲ್ಲಿ ಈ ಚಿತ್ರಕ್ಕೆ 30 ಕೋಟಿ ರೂಪಾಯಿ ಕಲೆಕ್ಷನ್ (ದಿ ಕೇರಳ ಸ್ಟೋರಿ 2 ಸಂಗ್ರಹ) ಆಗಿದೆ. ಮುಂದಿನ ದಿನಗಳಲ್ಲಿ ಕಲೆಕ್ಷನ್ ಕುಸಿಯುವ ಸೂಚನೆ ಸಿಕ್ಕಿದೆ.
2023ರಲ್ಲಿ ಬಂದಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಅದರ ಮುಂದುವರಿದ ಭಾಗವಾಗಿ ‘ದಿ ಕೇರಳ ಸ್ಟೋರಿ 2’ ಈಗ ರಿಲೀಸ್ ಆಗಿದೆ. ಈ ಚಿತ್ರಕ್ಕೆ ವಿಪುಲ್ ಅಮೃತಲಾಲ್ ಶಾ ಅವರು ಬಂಡವಾಳ ಹೂಡಿದ್ದಾರೆ. ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದ್ದಾರೆ. ಟ್ರೇಲರ್ ರಿಲೀಸ್ ಆದಾಗ ವಿವಾದ ಶುರುವಾಗಿತ್ತು. ವಿರುದ್ಧ ಅನೇಕರು ಕೋರ್ಟ್ ಮೆಟ್ಟಿಲು ಏರಿದ್ದರು.
ಮೊದಲ ದಿನ ಕೆಲವೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಕೇವಲ 75 ಲಕ್ಷ ರೂಪಾಯಿ ಕಲೆಕ್ಷನ್ ಆಗಿದೆ. ಎರಡನೇ ದಿನ 4.65 ಕೋಟಿ ರೂಪಾಯಿ ಆದಾಯ ಬಂತು. ಮೂರನೇ ದಿನ 4.74 ಕೋಟಿ ರೂಪಾಯಿ ಆಯಿತು. ಆದರೆ ಮೊದಲ ಸೋಮವಾರ ಬರುವುದೇ ಈ ಸಿನಿಮಾದ ಕಲೆಕ್ಷನ್ ಮತ್ತೆ ಕುಸಿಯುತ್ತದೆ.
2ನೇ ವೀಕೆಂಡ್‌ನಲ್ಲಿ ಸಂಗ್ರಹಣೆ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಆದರೆ ಅದು ಕೂಡ ಸಾಧ್ಯವಾಗಿಲ್ಲ. 2ನೇ ಶನಿವಾರ ಅಂದಾಜು 3.75 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಎಷ್ಟು ಪ್ರಚಾರ ಸಿಕ್ಕಿದ್ದರೂ ಒಂದು ದಿನ ಕೂಡ ಈ ಸಿನಿಮಾದ ಕಲೆಕ್ಷನ್ 5 ಕೋಟಿ ರೂಪಾಯಿ ದಾಟಲು ಸಾಧ್ಯವಾಗಿಲ್ಲ. ತೆವಳುತ್ತಾ ಸಾಗುತ್ತಿರುವ ಈ ಸಿನಿಮಾಗೆ ಈವರೆಗೂ ಒಟ್ಟು 30 ಕೋಟಿ ರೂಪಾಯಿ ಆದಾಯ ಬಂದಿದೆ.
ಇದನ್ನೂ ಓದಿ: ‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆಯ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ
ಈ ಸಿನಿಮಾದಿಂದ ಕೇರಳದ ಪ್ರತಿಷ್ಠೆಗೆ ಧಕ್ಕೆ ಎಂಬ ಕಾರಣಕ್ಕೆ ಶೀರ್ಷಿಕೆಯನ್ನು ವಿರೋಧಿಸಲಾಗಿದೆ. ಕೇರಳದಲ್ಲಿ ಈ ಚಿತ್ರಕ್ಕೆ ನೀರಸ ಪ್ರತಿಕ್ರಿಯೆಯಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಧುರಂಧರ 2’ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕಾಗಿ ಜನರು ಕಾದಿದ್ದಾರೆ. ‘ಧುರಂಧರ 2’ ಬಿಡುಗಡೆ ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾ ಹೆಸರಿಲ್ಲದಂತೆ ಅಖಾಡದಿಂದ ಹೊರಬೀಳುವುದು ಖಚಿತ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.