The Wedding of VIROSH: ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ವಯಸ್ಸಿನ ಅಂತರ ಎಷ್ಟು?

The Wedding of VIROSH: ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ವಯಸ್ಸಿನ ಅಂತರ ಎಷ್ಟು?


ಅಭಿಮಾನಿಗಳ ಬಹುಕಾಲದ ಕುತೂಹಲಕ್ಕೆ ತೆರೆಬಿದ್ದಿದೆ. ಟಾಲಿವುಡ್ನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ಕ್ರಶ್ ರಶ್ಮಿಕಾ ಮಂದಣ್ಣ (ರಶ್ಮಿಕಾ ಮಂದಣ್ಣ) ಫೆಬ್ರವರಿ 26 ರಂದು ರಾಜಸ್ಥಾನದ ಉದಯಪುರದಲ್ಲಿ ಹಸೆಮಣೆ ಏರಲಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ಈ ಜೋಡಿಯನ್ನು ವಿರೋಶ್ ಎಂದು ಕರೆಯುತ್ತಾರೆ. ಆ ಪದವನ್ನು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ (ವಿಜಯ್ ದೇವರಕೊಂಡ) ಒಪ್ಪಿದ್ದಾರೆ. ಈ ಮದುವೆಗೆ ‘ದಿ ವೆಡ್ಡಿಂಗ್ ಆಫ್ ವಿರೋಶ್’ (ದಿ ವೆಡ್ಡಿಂಗ್ ಆಫ್ ವಿರೋಶ್) ಎಂದು ಹೆಸರಿಸಲಾಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ವಯಸ್ಸಿನ ಅಂತರದ ಬಗ್ಗೆಯೂ ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ.

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ನಡುವೆ ಇರುವ ವಯಸ್ಸಿನ ಅಂತರ ಎಷ್ಟು ಎಂಬ ಬಗ್ಗೆ ಅಭಿಮಾನಿಗಳಿಗೆ ಕುತೂಹಲವಿದೆ. ಈ ಸುಂದರ ಜೋಡಿಯ ವೈಯಕ್ತಿಕ ಜೀವನದ ಬಗ್ಗೆ ಚರ್ಚೆಯಾಗುತ್ತಿರುವಾಗ ಅವರ ವಯಸ್ಸಿನ ಅಂತರದ ಬಗ್ಗೆಯೂ ಅಭಿಮಾನಿಗಳು ಕುತೂಹಲ ವ್ಯಕ್ತಪಡಿಸಿದ್ದಾರೆ. ಈ ಜೋಡಿಯ ನಡುವೆ 7 ವರ್ಷಗಳ ವಯಸ್ಸಿನ ಅಂತರವಿದೆ.

ವಿಜಯ್ ದೇವರಕೊಂಡ ಅವರು 1989ರ ಮೇ 9ರಂದು ಜನಿಸಿದ್ದು, ಸದ್ಯ ಅವರಿಗೆ 36 ವರ್ಷ ವಯಸ್ಸು. ರಶ್ಮಿಕಾ ಮಂದಣ್ಣ ಅವರು 1996ರ ಏಪ್ರಿಲ್ 5 ರಂದು ಜನಿಸಿದ್ದು, ಈಗ ಅವರಿಗೆ 29 ವರ್ಷ ವಯಸ್ಸು. ಏಳು ವರ್ಷಗಳ ವಯಸ್ಸಿನ ಅಂತರವೂ ಅನ್ಯೋನ್ಯತೆ ಮತ್ತು ಹೊಂದಾಣಿಕೆ ಅವರಲ್ಲಿ ಕಾಣಿಸುತ್ತದೆ. ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದಾರೆ.

2018ರಲ್ಲಿ ಬಿಡುಗಡೆಯಾದ ‘ಗೀತಾ ಗೋವಿಂದಂ’ ಸಿನಿಮಾದಲ್ಲಿ ಈ ಜೋಡಿಯ ಕೆಮಿಸ್ಟ್ರಿ ಮೋದಿ ಮಾಡಿದ್ರು. ನಂತರ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿಯೂ ಇವರ ಸ್ನೇಹ ಗಟ್ಟಿಯಾಯಿತು. ತೆರೆಯ ಮೇಲೆ ಅಭಿಮಾನಿಗಳಿಗೆ ಇಷ್ಟವಾದ ಈ ಜೋಡಿ ನಿಜ ಜೀವನದಲ್ಲೂ ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿದ್ದಾರೆ. ರಶ್ಮಿಕಾ ಹಲವು ಬಾರಿ ವಿಜಯ್ ತಮ್ಮ ಜೀವನದ ದೊಡ್ಡ ಶಕ್ತಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅವರು ರಶೀ, ವಿಜು: ರಶ್ಮಿಕಾ, ವಿಜಯ್‌ಕೊಂಡ ಪರಸ್ಪರ ಕರೆಯೋದು ಹೀಗೆ

ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರು ಸುಮಾರು 8 ವರ್ಷಗಳ ಸುದೀರ್ಘ ಡೇಟಿಂಗ್ ನಂತರ ಈಗ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಫೆಬ್ರವರಿ 26 ರಂದು ಉದಯಪುರದಲ್ಲಿ ಕೆಲವೇ ಆಪ್ತರು ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ವಿವಾಹ ಸಮಾರಂಭ. ಮಾರ್ಚ್ 4 ರಂದು ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ಆರತಕ್ಷತೆ ಸಮಾರಂಭ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *