
ಟಿ20 ವಿಶ್ವಕಪ್ 2026: ಟಿ20 ಆರಂಭದಿಂದಲೂ ಈ ಬಾರಿ ಭಾರತ ತಂಡ ಪಟ್ಟಕ್ಕೇರಿಲ್ಲ ಎಂದು ಭವಿಷ್ಯ ನುಡಿದಿದ್ದ ಪಾಕಿಸ್ತಾನ ಕ್ರಿಕೆಟ್ ಆಟಗಾರ ಮೊಹಮ್ಮದ್ ಅಮೀರ್ ಇದೀಗ ಪೇಚಿಗೆ ಸಿಲುಕಿದ್ದಾರೆ. ಅದರಲ್ಲೂ ಸೆಮಿಫೈನಲ್ ತಲುಪಲಿಲ್ಲ ಎಂದಿದ್ದ ಅಮಿರ್ ಲೆಕ್ಕಾಚಾರವನ್ನು ಟೀಮ್ ಇಂಡಿಯಾ ತಲೆ ಕೆಳಗೆ ಮಾಡಿತ್ತು.
ಇದಾಗ್ಯೂ ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆದ್ದೇ ಗೆಲ್ಲುತ್ತೆ ಎಂದು ಮೊಹಮ್ಮದ್ ಅಮೀರ್ ಖಾಸಗಿ ಚಾನೆಲ್‌ನಲ್ಲಿ ಹೇಳಿದ್ದಾರೆ. ಆದರೆ ಅಲ್ಲಿ ಕೂಡ ಅವರ ಲೆಕ್ಕಾಚಾರ ತಲೆಕೆಳಗಾಯಿತು. ಇಂಗ್ಲೆಂಡ್ ವಿರುದ್ಧ 7 ರನ್‌ಗಳ ಜಯದೊಂದಿಗೆ ಟೀಮ್ ಇಂಡಿಯಾ ಫೈನಲ್‌ಗೇರಿತು.
ಇನ್ನು ಫೈನಲ್ ಪಂದ್ಯ ಗೆಲ್ಲುವ ಫೇವರೇಟ್ ತಂಡ ಯಾವುದು ಎಂಬ ಪ್ರಶ್ನೆಗೂ ಮೊಹಮ್ಮದ್ ಅಮೀರ್ ಕಡೆಯಿಂದ ಬಂದಂತಹ ಉತ್ತರ ನ್ಯೂಝಿಲೆಂಡ್. ಭಾರತ ತಂಡವನ್ನು ನ್ಯೂಝಿಲೆಂಡ್ ಸೋಲಿಸಿತು ಎಂದು ಪಾಕ್ ಕ್ರಿಕೆಟಿಗ ಭವಿಷ್ಯ ನುಡಿದಿದ್ದರು. ಈ ಭವಿಷ್ಯವನ್ನು ಕೂಡ ಟೀಮ್ ಇಂಡಿಯಾ ಸುಳ್ಳಾಗಿಸಿದೆ.
ಅಹಮದಾಬಾದ್‌ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಫೈನಲ್ ಮ್ಯಾಚ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಪಂದ್ಯಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 255 ರನ್‌ಗಳು. ಈ ಮೂಲಕ ಭಾರತ ತಂಡವನ್ನು ಮೊದಲ ಇನಿಂಗ್ಸ್‌ನಲ್ಲೇ ಖಚಿತಪಡಿಸಿಕೊಂಡರು.
ಇನ್ನು ಈ ಬೃಹತ್ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡ 19 ಪಂದ್ಯಗಳಲ್ಲಿ ಕೇವಲ 159 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 96 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಈ ಗೆಲುವಿನ ಬೆನ್ನಲ್ಲೇ ಖಾಸಗಿ ಚಾನೆಲ್ ನ ಕಾರ್ಯಕ್ರಮದ ನಡುವೆ ಮೊಹಮ್ಮದ್ ಅಮೀರ್ ಜೊತೆ ವ್ಯಕ್ತಿಯೋರ್ವರು ಪಂದ್ಯದ ಫಲಿತಾಂಶದ ಬಗ್ಗೆ ಕೇಳಿದ್ದಾರೆ.
ನಿಮ್ಮ ಭವಿಷ್ಯ ಸುಳ್ಳಾಗಿದೆ, ಭಾರತ ತಂಡ ಗೆಲುವು ದಾಖಲಿಸಿದೆ. ಈ ಬಗ್ಗೆ ನೀವೇನು ಹೇಳುತ್ತೀರಾ ಎಂಬ ಪ್ರಶ್ನೆಯನ್ನು ಅಮೀರ್ ಮುಂದಿಡಲಾಗಿದೆ.
ಈ ಸರಳ ಪ್ರಶ್ನೆಗೆ ಕುಪಿತಗೊಂಡ ಮೊಹಮ್ಮದ್ ಅಮೀರ್, “ಅವರು (ಭಾರತ) ಗೆದ್ದರೆ ಟ್ರೋಫಿಯನ್ನು ನನ್ನ ಮನೆಗೆ ತರುವುದಿಲ್ಲ, ಅವರ ಮನೆಗೆ ಹೋಗುತ್ತಾರೆ.
ದುರಹಂಕಾರಿ ಮೊಹಮ್ಮದ್ ಅಮೀರ್ ಅಳಲು ಪ್ರಾರಂಭಿಸಿದ
“ಭಾರತ ಗೆದ್ದಿದೆ, ಅದು ಸರಿ. ಅವರು ಟ್ರೋಫಿಯನ್ನು ನನ್ನ ಮನೆಗೆ ತರಲು ಹೋಗುತ್ತಿಲ್ಲ, ಅವರು ಅದನ್ನು ತಮ್ಮ ಸ್ವಂತ ಸ್ಥಳಕ್ಕೆ ತೆಗೆದುಕೊಂಡು ಹೋಗುತ್ತಾರೆ.”
ಅಮೀರ್ ಮುಖ ನೋಡಿ, ಫ್ಲಾಪ್ ಮುನ್ಸೂಚನೆಗಳ ನಂತರ, ಅವರು ಈಗ ಅಳುತ್ತಿದ್ದಾರೆ
#INDvsNZ#T20WorldCup2026Finalpic.twitter.com/GuVltQQqD3
— ಅಭಿಮಾನಿ ಖಾತೆ ರಿಚರ್ಡ್ ಕೆಟಲ್ಬೋರೋಗ್ (@RichKettle07) ಮಾರ್ಚ್ 9, 2026
ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದೀಗ ಮೊಹಮ್ಮದ್ ಅಮೀರ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.
ದುರಹಂಕಾರಿ ಮೊಹಮ್ಮದ್ ಅಮೀರ್ ಅಳಲು ಪ್ರಾರಂಭಿಸಿದ 