Headlines

‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ? ಇಲ್ಲಿದೆ ಕಾರಣ

‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ? ಇಲ್ಲಿದೆ ಕಾರಣ


ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (ರಾಜೇಂದ್ರ ಸಿಂಗ್ ಬಾಬು) ಅವರು ನಿರ್ದೇಶನ ಮಾಡಿರುವ ‘ವೀರ ಕಂಬಳ’ ಸಿನಿಮಾ ಫೆಬ್ರವರಿ 27ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ರಿಲೀಸ್ ದಿನಾಂಕದ ಹತ್ತಿರ ಆಗಿರುವ ಈ ಹೊತ್ತಿನಲ್ಲಿ ಹೊಸ ಅಪ್‌ಡೇಟ್ಸ್ ಹಂಚಿಕೊಳ್ಳಲಾಗುತ್ತಿದೆ. ‘ವೀರ ಕಂಬಳ’ (ವೀರ ಕಂಬಳ) ರೂಪುಗೊಂಡಿದ್ದರ ಹಿಂದೆ ಸಾಕಷ್ಟು ಸುದೀರ್ಘವಾದ ಕಥನವಿದೆ. ಅಂದಾಜು ಏಳುನೂರು ವರ್ಷಗಳಷ್ಟು ಐತಿಹ್ಯವಿರುವ ಕಂಬಳದ ಬಗ್ಗೆ ಇಂಚಿಂಚು ಮಾಹಿತಿಯನ್ನು ಕಲೆಹಾಕುವ ಮೂಲಕ ರಾಜೇಂದ್ರ ಸಿಂಗ್ ಬಾಬು ಅವರು ಈ ಸಿನಿಮಾವನ್ನು ರೂಪಿಸಿದ್ದಾರೆ. ಈ ಸಿನಿಮಾದಲ್ಲಿನ ಒಂದು ಮಹತ್ವದ ಪಾತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (ವೀರೇಂದ್ರ ಹೆಗ್ಗಡೆ) ನಟಿಸಿದ್ದಾರೆ.

ವೀರೇಂದ್ರ ಹೆಗ್ಗಡೆ ಅವರು ‘ವೀರ ಕಂಬಳ’ ಸಿನಿಮಾದಲ್ಲಿ ನಟಿಸಿದ್ದಾರೆ ಎಂಬ ಸುದ್ದಿ ಈ ಮೊದಲೇ ಹೊರಬಂದಿತ್ತು. ಆದರೆ, ನಿರ್ದೇಶಕರಾಗಲಿ, ಚಿತ್ರತಂಡದವರಾಗಲಿ ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಬಿಟ್ಟು ಕೊಡದೆ ಗೌಪ್ಯತೆಯನ್ನು ಕಾಪಾಡಿಕೊಂಡಿದ್ದಾರೆ. ಈಗ ವೀರೇಂದ್ರ ಹೆಗ್ಗಡೆ ನಿರ್ವಹಿಸಿರೋ ಪಾತ್ರದ ಚಹರೆಗಳನ್ನು ನಿರ್ದೇಶಕರೇ ಪ್ರದರ್ಶಿಸಿದ್ದಾರೆ.

ಈ ಪಾತ್ರಕ್ಕೆ ವೀರೇಂದ್ರ ಹೆಗ್ಗಡೆ ಅವರನ್ನೇ ಆಯ್ಕೆ ಮಾಡಿಕೊಂಡಿದ್ದರ ಹಿಂದಿರುವ ಅಂಶಗಳನ್ನೂ ಕೂಡ ರಾಜೇಂದ್ರ ಸಿಂಗ್ ಬಾಬು ಅವರು ಹಂಚಿಕೊಂಡಿದ್ದಾರೆ. ಕಂಬಳದ ಇತಿಹಾಸ ಕೆದಗುತ್ತಾ ಹೋದಂತೆ ಅದಕ್ಕೂ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೂ ಇರುವ ನಂಟಿನ ವಿಚಾರ ರಾಜೇಂದ್ರ ಸಿಂಗ್ ಬಾಬು ಅವರಿಗೆ ಅಚ್ಚರಿ ಮೂಡಿಸಿತು. ಅದಕ್ಕಾಗಿ ಈ ನಿರ್ಧಾರ ತೆಗೆದುಕೊಂಡರು.

ಅಲ್ಲಿಯವರೆಗೆ ತುಳುನಾಡ ಸೀಮೆಯ ಖಾಸಗಿ ಮನರಂಜನೆಯ ಕಂಬಳವನ್ನು 70 ರ ದಶಕದಲ್ಲಿ ದೊಡ್ಡ ಮಟ್ಟದಲ್ಲಿ ನಡೆಸುತ್ತಿದ್ದವರು ವೀರೇಂದ್ರ ಹೆಗ್ಗಡೆ. ಆ ನಂತರ ಅದು ಬೇರೆ ಬೇರೆ ರೂಪಗಳಲ್ಲಿ ರೂಪಾಂತರಗೊಂಡು ಇಡೀ ಕರುನಾಡನ್ನೇ ಸೆಳೆದಿತ್ತು. ಈ ಕಾರಣದಿಂದಲೇ ವೀರೇಂದ್ರ ಹೆಗ್ಗಡೆ ‘ವೀರ ಕಂಬಳ’ ಸಿನಿಮಾದಲ್ಲಿನ ಮಹತ್ವದ ಪಾತ್ರ ಮಾಡಬೇಕೆಂಬ ಆಸೆಯು ನಿರ್ದೇಶಕರ ಮನಸಲ್ಲಿ ಮೂಡಿತ್ತು. ಅದು ನೆರವೇರಿದೆ. ಬಹಳ ಸಂಭ್ರಮದಿಂದಲೇ ವೀರೇಂದ್ರ ಹೆಗ್ಗಡೆ ಅವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಹುದ್ದೆಗಾಗಿ ಹಂಬಲಿಸಿದವನು ನಾನಲ್ಲ, ಕೇಳಿದವನೂ ಅಲ್ಲ: ವೀರೇಂದ್ರ ಹೆಗ್ಗಡೆ

‘ವೀರ ಕಂಬಳ’ ಸಿನಿಮಾವನ್ನು ‘ಬಾಬಾಸ್ ಬ್ಲೆಸಿಂಗ್ ಫಿಲ್ಮ್ಸ್’ ಬ್ಯಾನರ್ ಮೂಲಕ ಡಾ. ವಿನಿತಾ ವಿಜಯ್ ಕುಮಾರ್ ರೆಡ್ಡಿ ಮತ್ತು ಅರುಣ್ ರೈ ತೊಡಾರ್ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರೈ, ರವಿಶಂಕರ್ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಧಿಕಾ ನಾರಾಯಣ್ ವಿಶೇಷ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ತುಳು ಭಾಷೆಯಲ್ಲಿಯೂ ಸಿನಿಮಾ ಬಿಡುಗಡೆ ಆಗಲಿದೆ, ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಮುಂತಾದವರು ನಟಿಸಿದ್ದಾರೆ.

ವಿಜಯ್ ಕೊಡಿಯಾಲ್‌ಬೈಲ್ ಅವರು ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಮಣಿಕಾಂತ್ ಕದ್ರಿ ಅವರು ಸಂಗೀತ ನೀಡಿದ್ದಾರೆ. ಆರ್. ಗಿರಿ ಅವರ ಛಾಯಾಗ್ರಹಣ, ಶ್ರೀನಿವಾಸ್ ಎಸ್. ಬಾಬು ಅವರ ಸಂಕಲನ, ಚಂದ್ರಶೇಖರ್ ಸುವರ್ಣ ಮುಲ್ಕಿ ಅವರ ಕಲಾ ನಿರ್ದೇಶನ, ಕಾಂತ ಅವರ ಪ್ರಸಾದನ, ಭಾಷಾ ಅವರ ವಸ್ತ್ರವಿನ್ಯಾಸ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *