Headlines

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಡೀ ಕುಟುಂಬವೇ ದುರಂತ ಅಂತ್ಯ

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಡೀ ಕುಟುಂಬವೇ ದುರಂತ ಅಂತ್ಯ


ಬೆಳಗಾವಿ, (ಫೆಬ್ರವರಿ 18): ಜಮಖಂಡಿ- ಮಿರಾಜ್ ರಾಜ್ಯ ಹೆದ್ದಾರಿಯಲ್ಲಿ (ಮಿರಜ್ ಜಮಖಂಡಿ ಹೆದ್ದಾರಿ) ಭೀಕರ ರಸ್ತೆ ಅಪಘಾತದಲ್ಲಿ ಇಡೀ ಕುಟುಂಬ ದಾರುಣ ಅಂತ್ಯಕಂಡಿರುವ ಘಟನೆ ಬೆಳಗಾವಿ (ಬೆಳಗಾವಿ) ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ, ಬೈಕ್ ನಲ್ಲಿದ್ದ ಗಂಡ, ಹೆಂಡ್ತಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಗಿರೆಪ್ಪ ಕುಂದ್ರಾಳಿ, ಪತ್ನಿ ಮಂಜುಳಾ ಕುಂದ್ರಾಳಿ(27), ಮಗು ಆರಾಧ್ಯ ಕುಂದ್ರಾಳಿ(7) ಮೃತ ದುರ್ವೈವಿಗಳು. ಮೂವರು ಬೈಕ್ ಮೇಲೆ ಮಹಾರಾಷ್ಟ್ರದ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದರೆ ಈ ದುರ್ಘಟನೆ ಸಂಭವಿಸಿದೆ.

ಗಿರೆಪ್ಪ, ಮಂಜುಳಾ ಹಾಗೂ ಆರಾಧ್ಯ ಒಂದೇ ಬೈಕ್‌ನಲ್ಲಿ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿ ಗಂಡ ಹೆಂಡ್ತಿ ಹಾಗೂ ಮಗಳು ಕಾಣಿಸಿಕೊಂಡಿದ್ದಾರೆ. ಇನ್ನು ಸ್ಥಳಕ್ಕೆ ಹಾರೂಗೇರಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ.

ಇದನ್ನೂ ಓದಿ: ಚಾಲಕನ ಜೊತೆ ಮಾತಾಡಿದ್ದಕ್ಕೆ ಪತ್ನಿಯನ್ನೇ ಕೊಚ್ಚಿಕೊಂಡ ಪತಿ!

ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಮಗು ಸಾವು

ಯಾದಗಿರಿ: ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಗಾಜರಕೋಟ ಗ್ರಾಮದಲ್ಲಿ ನಡೆದಿದೆ. ಪುನೀತ್ ಮೃತ ಮಗು. ಗಾಜರಕೋಟ ಗ್ರಾಮದ ವಿಸ್ಡಮ್ ಶಾಲೆಯ ವಿದ್ಯಾರ್ಥಿ ಪುನೀತ್ ನಿನ್ನೆ (ಫೆಬ್ರವರಿ 17) ಬಸ್ ನಿಂದ ಕೆಳಗೆ ಇಳಿಯುತ್ತಿದ್ದಂತೆ ಚಾಲಕ ರಿವರ್ಸ್ ತೆಗೆದುಕೊಂಡಿದ್ದಾನೆ. ಆಗ ಬಸ್ ಪುನೀತ್ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮಸ್ಥರು ಮಗುವಿನ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಬಸ್ ಡ್ರೈವರ್‌ಗೆ ಜೀವಾವಧಿ ಶಿಕ್ಷೆ ನೀಡುವಂತೆ ಹೇಳಿದರು. ಬಳಿಕ ಪೊಲೀಸರ ಮನವೊಲಿಕೆಯಿಂದ ಪ್ರತಿಭಟನೆ ಕೈಬಿಟ್ಟರು.

ಡಿವೈಡರ್’ಗೆ ಕಾರು ಡಿಕ್ಕಿ

ಬೀದರ್: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಂಭೀರವಾದ ಘಟನೆ ಹಳ್ಳಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ. ಹುಮ್ನಾಬಾದ್ ತಾಲೂಕಿನ ಸಿಂಧನಕೇರಾದ ಕಾಶೀನಾಥ್ ಹಾಗೂ ಧುಮ್ಮನಸೂರ ನಿವಾಸಿ ನೀತೇಶ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು, ಇವರನ್ನು ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಾರಾಷ್ಟ್ರದ ಉಮ್ಮರ್ಗಾ ಕಡೆಯಿಂದ ಹುಮ್ನಾಬಾದ್ ಕಡೆ ತೆರಳುವಾಗ ಈ ದುರ್ಘಟನೆ ನಡೆದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *