ಬೆಂಗಳೂರು, ಡಿಸೆಂಬರ್ 09: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್ ವಿಧಾನಸಭೆ ಕಲಾಪದಲ್ಲಿ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸುವಂತೆ ಸೂಚಿಸಲಾಗಿದೆ. ಟಿಪ್ಪು ಜಯಂತಿ ವಿಚಾರವಾಗಿ ಹಿಂದೆ ಸಾಕಷ್ಟು ಪರ ವಿರೋಧ ಹೇಳಿಕೆಗಳು ಕಂಡುಬಂದಿದ್ದು, ಹಿಂಸಾಚಾರಕ್ಕೂ ಇದು ಕಾರಣವಾಗಿತ್ತು. ಇದೀಗ ಮತ್ತೆ ಆ ವಿಚಾರ ಮುನ್ನೆಲೆಗೆ ಬಂದಿದ್ದು ವಿಪಕ್ಷ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್. ಅಶೋಕ್, ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಟಿಪ್ಪು ಜಯಂತಿ ಆದ್ರೂ ಮಾಡ್ಕೊಳ್ಳಲಿ, ಲಾಡೆನ್ ಜಯಂತಿ ಆದ್ರೂ ಮಾಡ್ಕೊಳ್ಳಲಿ. ಅವರ ಸರ್ಕಾರ ಇದೆ. ಜನರಿಗೆ ಯಾರ ಪರ ಎಂದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.