Headlines

ಭಾರೀ ವಿರೋಧ ಬೆನ್ನಲ್ಲೇ ಎಚ್ಚೆತ್ತ ಸಚಿವರು: ಸರ್ಕಾರಿ ಬಸ್​ಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ತೆರವಿಗೆ ಸೂಚನೆ

ಭಾರೀ ವಿರೋಧ ಬೆನ್ನಲ್ಲೇ ಎಚ್ಚೆತ್ತ ಸಚಿವರು: ಸರ್ಕಾರಿ ಬಸ್​ಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ತೆರವಿಗೆ ಸೂಚನೆ


ತುಂಬಾ ಉತ್ಪನ್ನಗಳ ಜಾಹೀರಾತುಚಿತ್ರದ ಕ್ರೆಡಿಟ್ ಮೂಲ: newindianexpress.com

ಬೆಂಗಳೂರು, ಜನವರಿ 30: ಸರ್ಕಾರಿ ಬಸ್‌ಗಳ ಮೇಲೆ ತುಂಬಾಕು ಉತ್ಪನ್ನಗಳ ಜಾಹೀರಾತುಗಳು (ತಂಬಾಕು ಜಾಹೀರಾತುಗಳು) ಮುದ್ರಿಸುವ ಮೂಲಕ ಸಾರಿಗೆ ಸಂಸ್ಥೆಗಳು ಆದಾಯದ ವ್ಯಾಮೋಹಕ್ಕೆ ಒಳಗಾಗಿವೆ ಎಂಬ ಮಾತುಗಳು ಕೇಳಿಬಂದವು. ಪ್ರತಿಯೊಂದು ಸರ್ಕಾರಿ ಬಸ್‌ಗಳ ಮೇಲೆ ತುಂಬಾಕು ಉತ್ಪನ್ನಗಳ ಜಾಹೀರಾತುಗಳು ರಾರಾಜಿಸುತ್ತಿದ್ದವು. ಈ ಬಗ್ಗೆ ಕನ್ನಡ ಸಂಘಟನೆಗಳು ಸೇರಿದಂತೆ ಜನರು ಕೂಡ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನಲ್ಲೇ ಇದೀಗ ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತು ತೆಗೆಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (ರಾಮಲಿಂಗಾ ರೆಡ್ಡಿ) ನಾಲ್ಕು ನಿಗಮಗಳಿಗೆ ಖಡಕ್ ಸೂಚನೆ ನೀಡಿದೆ.

ಆದಾಯದಿಂದ ರಾಜ್ಯದ ಎಲ್ಲಾ ಸಾರಿಗೆ ಬಸ್‌ಗಳ ಮೇಲೂ ಜಾಹೀರಾತುಗಳನ್ನು ಹೆಚ್ಚಿಸುವ ಉದ್ದೇಶವನ್ನು ಅಳವಡಿಸಲಾಗಿದೆ. ಕೆಲವು ತುಂಬಾಕು ಉತ್ಪನ್ನಗಳಿಗೆ ಸಂಬಂಧಿಸಿದ ಜಾಹೀರಾತುಗಳಾಗಿದ್ದವು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಪರಿಣಾಮವಾಗಿ, ಹಲವು ಕಡೆಗಳಲ್ಲಿ ಬಸ್‌ಗಳ ಮೇಲಿದ್ದ ಜಾಹೀರಾತುಗಳನ್ನು ಜನರು ಕಿತ್ತು ಹಾಕಿದ್ದ ಘಟನೆಗಳು ನಡೆದಿವೆ.

ಟಿವಿ9 ಬೆನ್ನಲ್ಲೇ ಅಧಿಕಾರಿಗಳಿಗೆ ರಾಮಲಿಂಗಾರೆಡ್ಡಿ ಸೂಚನೆ

ಈ ಬಗ್ಗೆ TV9 ಕೂಡ ಸುದ್ದಿ ಬಿತ್ತರಿಸಿತ್ತು. ವರದಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 4 ನಿಗಮದ ಎಂಡಿಗಳಿಗೆ ತುಂಬಾ ಉತ್ಪನ್ನಗಳ ಜಾಹೀರಾತು ಪ್ರಚಾರ ಮಾಡದಂತೆ ಸೂಚನೆ ನೀಡಲಾಗಿದೆ. ಜೊತೆಗೆ ಸಾರಿಗೆ ನಿಗಮದ ಬಸ್ಸುಗಳು ಮತ್ತು ಬಸ್ ನಿಲ್ದಾಣಗಳಲ್ಲಿ ತುಂಬಕು ಉತ್ಪನ್ನಗಳ ಜಾಹೀರಾತುಗಳನ್ನು ತಕ್ಷಣವೇ ತೆಗೆದುಹಾಕುವಂತೆ ಸೂಚಿಸಲಾಗಿದೆ.

ಆದೇಶದಲ್ಲೇನಿದೆ?

ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳು ಮತ್ತು ಬಸ್ ನಿಲ್ದಾಣಗಳ ತುಂಬಾಕು ಉತ್ಪನ್ನಗಳ ಸೇವನೆಯನ್ನು ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಸಾರಿಗೆ ಸಂಸ್ಥೆಗೂ ಆದಾಯದ ವ್ಯಾಮೋಹ: ಕೆಟ್ಟಿತು ಸರ್ಕಾರಿ ಬಸ್ಸುಗಳ ಅಂದ

ತುಂಬಾಕು ಉತ್ಪನ್ನಗಳ ಸೇವನೆಗೆ ಪ್ರೇರೇಪಿಸುವಂತಹ ಜಾಹೀರಾತುಗಳನ್ನು ಬಸ್ಸುಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿದೆ ಅದನ್ನು ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ, ನಿಗದಿತ ಸಮಯದೊಳಗೆ ಸದರಿ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *