ಬೆಂಗಳೂರು: ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಕೆ ಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿದು ಶತಕ ಸಿಡಿಸಿದ್ದಾರೆ. ಈ ಮೂಲಕ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ. ಬನ್ನಿ ನಾವಿಂದು ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ಟಾಪ್ – 6 ಭಾರತೀಯ ಓಪನ್ನರ್ಸ್ ಯಾರು ನೋಡೋಣ

ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಕೆ ಎಲ್ ರಾಹುಲ್ ಬರೋಬ್ಬರಿ 8 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 2016ರ ಬಳಿಕ ರಾಹುಲ್ ಭಾರತದಲ್ಲಿ ಮೊದಲ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.

ಈ ಟೆಸ್ಟ್ ಶತಕದ ಮೂಲಕ ಕೆ ಎಲ್ ರಾಹುಲ್, ಮಾಜಿ ಕ್ರಿಕೆಟಿಗರಾದ ಗೌತಮ್ ಗಂಭೀರ್ ಹಾಗೂ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.

ಬನ್ನಿ ನಾವಿಂದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ಶತಕ ಸಿಡಿಸಿದ ಭಾರತೀಯ ಆರಂಭಿಕರು ಯಾರು ಎನ್ನುವುದನ್ನು ನೋಡೋಣ.

ಟೀಂ ಇಂಡಿಯಾ ಹೆಡ್ ಕೋಚ್ ಮಾಜಿ ಆರಂಭಿಕ ಬ್ಯಾಟರ್ ಗೌತಮ್ ಗಂಭೀರ್, 101 ಇನ್ನಿಂಗ್ಸ್‌ಗಳನ್ನಾಡಿ 9 ಶತಕ ಸಿಡಿಸುವ ಮೂಲಕ ಆರನೇ ಸ್ಥಾನದಲ್ಲಿದ್ದಾರೆ.

ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, 66 ಟೆಸ್ಟ್ ಇನ್ನಿಂಗ್ಸ್‌ಗಳನ್ನಾಡಿ 9 ಶತಕ ಸಿಡಿಸುವ ಮೂಲಕ ಐದನೇ ಸ್ಥಾನದಲ್ಲಿದ್ದಾರೆ.

ಕನ್ನಡಿಗ ಕೆ ಎಲ್ ರಾಹುಲ್, 94 ಇನ್ನಿಂಗ್ಸ್‌ಗಳನ್ನಾಡಿ ಟೀಂ ಇಂಡಿಯಾ ಆರಂಭಿಕನಾಗಿ 10 ಶತಕ ಸಿಡಿಸುವ ಮೂಲಕ ರಾಹುಲ್ ಇದೀಗ ನಾಲ್ಕನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

ತಮಿಳುನಾಡು ಮೂಲದ ಕ್ರಿಕೆಟಿಗ ಮುರಳಿ ವಿಜಯ್ 100 ಇನ್ನಿಂಗ್ಸ್‌ಗಳನ್ನಾಡಿ 12 ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಆರಂಭಿಕನಾಗಿ ಗರಿಷ್ಠ ಶತಕ ಸಿಡಿಸಿದ ಬ್ಯಾಟರ್‌ಗಳಲ್ಲಿ ಪಟ್ಟಿಯಲ್ಲಿ ವಿಜಯ್ ಮೂರನೇ ಸ್ಥಾನದಲ್ಲಿದ್ದಾರೆ.

ಭಾರತ ಕಂಡ ಸ್ಪೋಟಕ ಟೆಸ್ಟ್ ಆರಂಭಿಕ ಬ್ಯಾಟರ್ ವಿರೇಂದ್ರ ಸೆಹ್ವಾಗ್, 168 ಟೆಸ್ಟ್ ಇನ್ನಿಂಗ್ಸ್‌ಗಳನ್ನಾಡಿ 22 ಟೆಸ್ಟ್ ಶತಕ ಸಿಡಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್, 203 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದು 33 ಶತಕ ಸಿಡಿಸುವ ಮೂಲಕ ಮೊದಲ ಸ್ಥಾನದಲ್ಲಿ ಭದ್ರವಾಗಿದ್ದಾರೆ.

Source link
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ಟೀಂ ಇಂಡಿಯಾ ಟಾಪ್-6 ಓಪನ್ನರ್ಸ್! ಎಲೈಟ್ ಗ್ರೂಪ್ ಸೇರಿದ ರಾಹುಲ್