20226ರ ಎರಡು ಬಹುನಿರೀಕ್ಷಿತ ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗುತ್ತಿರುವುದರ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ‘ಟಾಕ್ಸಿಕ್’ ಮತ್ತು ‘ಧುರಂಧರ 2’ (ಧುರಂಧರ 2) ಸಿನಿಮಾಗಳು ಮಾರ್ಚ್ 19 ರಂದು ರಿಲೀಸ್ ಆಗಲಿವೆ. ಈ ಸಿನಿಮಾಗಳ ಕ್ಲ್ಯಾಶ್ ಬಗ್ಗೆ ಬಾಕ್ಸ್ ಆಫೀಸ್ ಪಂಡಿತರು ಹಲವು ರೀತಿ ಅಭಿಪ್ರಾಯಗಳನ್ನು ನೀಡುತ್ತಿದ್ದಾರೆ. ಇಂಥ ಕ್ಲ್ಯಾಶ್ ಉತ್ತಮವಲ್ಲ ಎಂದು ಹೇಳುತ್ತಿದ್ದಾರೆ. ಅಚ್ಚರಿ ಎಂದರೆ, ‘ಧುರಂಧರ 2’ ಮತ್ತು ‘ಟಾಕ್ಸಿಕ್’ (ಟಾಕ್ಸಿಕ್) ಒಟ್ಟು ಸೇರಿ ಬರೋಬ್ಬರಿ 10 ಕೋಟಿಗಳನ್ನು ಸೆಳೆಯಲಿದೆ ಅಂದಾಜಿಸಲಾಗಿದೆ.
ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟೀಸರ್ ಧೂಳೆಬ್ಬಿಸಿದೆ. ‘ಕೆಜಿಎಫ್: ಚಾಪ್ಟರ್ 2’ ಗೆಲುವಿನ ಬಳಿಕ ಯಶ್ ನಟಿಸಿದ ಸಿನಿಮಾ ಎಂಬ ಕಾರಣಕ್ಕೆ ‘ಟಾಕ್ಸಿಕ್’ ಸಿಕ್ಕಾಪಟ್ಟೆ ಹೈಪ್ ಸೃಷ್ಟಿ ಮಾಡಿದೆ. ಈ ಸಿನಿಮಾಗೆ ಗೀತು ಮೋಹನ್‌ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ರುಕ್ಮಿಣಿ ವಸಂತ್, ನಯನತಾರಾ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ.
‘ಧುರಂಧರ 2’ ಸಿನಿಮಾ ಕೂಡ ಸಣ್ಣದೇನಲ್ಲ. ರಣವೀರ್ ಸಿಂಗ್, ಅರ್ಜುನ್ ರಾಮ್‌ಪಾಲ್, ಸಾರಾ ಅರ್ಜುನ್, ಸಂಜಯ್ ದತ್ ಮುಂತಾದವರು ನಟಿಸಿರುವ ಈ ಸಿನಿಮಾಗೆ ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದ್ದಾರೆ. ‘ಧುರಂಧರ’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿರುವುದರಿಂದ ಸೀಕ್ವೆಲ್ ಮೇಲೆ ನಿರೀಕ್ಷೆ ಜಾಸ್ತಿ ಇದೆ. ಮಾರ್ಚ್ 19 ರಂದು ಈ ಸಿನಿಮಾ ಕೂಡ ಭರ್ಜರಿ ಓಪನಿಂಗ್ ಪಡೆದುಕೊಳ್ಳಲಿದೆ.
ಈ ಎರಡು ಸಿನಿಮಾಗಳ ಮೇಲಿಂದ ಒಂದು ಚಿತ್ರದ ರಿಲೀಸ್ ದಿನಾಂಕ ಮುಂದೂಡಿಕೆ ಆದರೆ ದೊಡ್ಡ ಕ್ಲ್ಯಾಶ್ ತಪ್ಪುತ್ತದೆ. ಎರಡೂ ಸಿನಿಮಾಗಳು ಬೇರೆ ಬೇರೆ ದಿನಾಂಕಗಳಲ್ಲಿ ಬಿಡುಗಡೆ ಆದರೆ ತಲಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಸಾಮರ್ಥ್ಯವಿದೆ. ಆದರೆ ಎರಡೂ ಚಿತ್ರತಂಡಗಳು ಹಠಕ್ಕೆ ಬಿದ್ದು ಒಂದೇ ದಿನ ರಿಲೀಸ್ ಆಗುತ್ತಿವೆ.
ಇದನ್ನೂ ಓದಿ: ರವಿ ಬಸ್ರೂರು: ಟಾಕ್ಸಿಕ್ ಚಿತ್ರಕ್ಕೆ 5 ಸಂಗೀತ ನಿರ್ದೇಶಕರು; ಜೀ ಮ್ಯೂಸಿಕ್ ತೆಕ್ಕೆಗೆ ಆಡಿಯೋ ಹಕ್ಕು
‘ಟಾಕ್ಸಿಕ್’ ಚಿತ್ರತಂಡದವರು ಮೊದಲು ರಿಲೀಸ್ ದಿನಾಂಕವನ್ನು ಅನೌನ್ಸ್ ಮಾಡಿದ್ದರು. ಮಾರ್ಚ್ 19 ರಂದು ಬಿಡುಗಡೆ ಎಂದು ಖಚಿತಪಡಿಸಿದ್ದರು. ಆದರೆ ‘ಧುರಂಧರ 2’ ಚಿತ್ರತಂಡ ಕೂಡ ಅದೇ ದಿನಾಂಕದಲ್ಲಿ ರಿಲೀಸ್ ಮಾಡುವುದಾಗಿ ಹಠ ಹಿಡಿದಿದೆ. ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಹಲವು ಬಗೆಯ ಲೆಕ್ಕಾಚಾರಗಳು ನಡೆಯುತ್ತಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.